ADVERTISEMENT

ದೆಹಲಿ ತಬ್ಲಿಗಿ ಜಮಾತ್ ಸಭೆಯಲ್ಲಿ ಪಾಲ್ಗೊಂಡಿದ್ದ ಬೆಳಗಾವಿಯ ಮೂವರಲ್ಲಿ ಕೊರೊನಾ ದೃಢ

ಗಡಿ ಜಿಲ್ಲೆಯಲ್ಲಿ ಹೆಚ್ಚಿದ ಅತಂಕ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2020, 10:59 IST
Last Updated 3 ಏಪ್ರಿಲ್ 2020, 10:59 IST
ಸಂದರ್ಭಿಕ ಚಿತ್ರ
ಸಂದರ್ಭಿಕ ಚಿತ್ರ   

ಬೆಳಗಾವಿ: ಜಿಲ್ಲೆಯ ಮೂವರಲ್ಲಿ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ಧಾರವಾಡದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.

‘ಬೆಳಗಾವಿಯಲ್ಲಿ ಈವರೆಗೆ ಎಲ್ಲರ ವರದಿಯೂ ನೆಗೆಟಿವ್ ಇತ್ತು. ಆದರೆ, ದೆಹಲಿಯ ತಬ್ಲಿಗಿ ಜಮಾತ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ ಮೂವರಿಗೆ ಪಾಸಿಟಿವ್ ಬಂದಿದೆ. ಅವರಿಗೆ ಬಿಮ್ಸ್‌ ಆಸ್ಪತ್ರೆಯ ಐಸೋಲೇಷನ್‌ ವಾರ್ಡ್‌ಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಾದ್ಯಂತ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ’ ಎಂದು ಹೇಳಿದ್ದಾರೆ.

ಈ ಕುರಿತು ಇಲ್ಲಿನ ಜಿಲ್ಲಾಡಳಿತದಿಂದ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ. ಆದರೆ, ರಸ್ತೆಗಳಲ್ಲಿ ಜನರ ಓಡಾಟವನ್ನು ನಿರ್ಬಂಧಿಸಲಾಗುತ್ತಿದೆ. ಅಲ್ಲಲ್ಲಿ ಪೊಲೀಸರು ಜನರು ಮನೆಗಳಿಂದ ಬಾರದಂತೆ ಮೈಕ್‌ಗಳಲ್ಲಿ ಅನೌನ್ಸ್‌ ಮಾಡುತ್ತಿದ್ದಾರೆ.

ADVERTISEMENT

‘ದೆಹಲಿಯ ನಿಜಾಮುದ್ದೀನ್ ತಬ್ಲೀಗ್ ಧಾರ್ಮಿಕ ಸಭೆಯಲ್ಲಿ ಜಿಲ್ಲೆಯ ಒಟ್ಟು 62 ಜನರು ಭಾಗವಹಿಸಿದ್ದರು. ಅವರಲ್ಲಿ ಯಾರಿಗೂ ರೋಗದ ಲಕ್ಷಣಗಳು ಕಂಡುಬಂದಿಲ್ಲ. 42 ಜನರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ 33 ಮಂದಿಯ ಗಂಟಲು ದ್ರವದ ‌ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಗುರುವಾರ ತಿಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.