ADVERTISEMENT

ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಸಾರ್ವಜನಿಕ ದರ್ಶನ ಸೆ.30ರವರೆಗೆ ನಿಷೇಧ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2020, 11:28 IST
Last Updated 1 ಸೆಪ್ಟೆಂಬರ್ 2020, 11:28 IST
ದೇಶದಲ್ಲಿ ಕೊರೊನಾ ನಿಯಂತ್ರಣಕ್ಕೆ ಪ್ರಾರ್ಥಿಸಿ ಶ್ರೀಕ್ಷೇತ್ರ ರೇಣುಕಾ ಯಲ್ಲಮ್ಮನ ಗುಡ್ಡದಲ್ಲಿ ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಮಂಗಳವಾರ ವಿಶೇಷ ಪೂಜೆ ಸಲ್ಲಿಸಿದರು. ಇಒ ರವಿ ಕೋಟಾರಗಸ್ತಿ ಇದ್ದಾರೆ
ದೇಶದಲ್ಲಿ ಕೊರೊನಾ ನಿಯಂತ್ರಣಕ್ಕೆ ಪ್ರಾರ್ಥಿಸಿ ಶ್ರೀಕ್ಷೇತ್ರ ರೇಣುಕಾ ಯಲ್ಲಮ್ಮನ ಗುಡ್ಡದಲ್ಲಿ ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಮಂಗಳವಾರ ವಿಶೇಷ ಪೂಜೆ ಸಲ್ಲಿಸಿದರು. ಇಒ ರವಿ ಕೋಟಾರಗಸ್ತಿ ಇದ್ದಾರೆ   

ಉಗರಗೋಳ: ‘ಶ್ರೀಕ್ಷೇತ್ರ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಸಾರ್ವಜನಿಕ ದರ್ಶನವನ್ನು ಸೆ.30ರವರೆಗೆ ನಿಷೇಧಿಸಲಾಗಿದೆ. ಕೊರೊನಾ ಕಾರಣದಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಭಕ್ತರು ಸಹಕಾರ ನೀಡಬೇಕು’ ಎಂದು ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಹೇಳಿದರು.

ಕೊರೊನಾ ನಿಯಂತ್ರಣಕ್ಕೆ ದೇವಸ್ಥಾನದಲ್ಲಿ ಮಂಗಳವಾರ ವಿಶೇಷ ಪೂಜೆ ಸಲ್ಲಿಸಿದ ನಂತರ ಅವರು ಮಾತನಾಡಿದರು.

‘ದೇಶದ ನಾನಾ ರಾಜ್ಯಗಳಿಂದ ಭಕ್ತರು ಇಲ್ಲಿಗೆ ಬರುತ್ತಾರೆ. ಈ ಕಾರಣದಿಂದ ಕೋವಿಡ್ ಹರಡುವ ಸಾಧ್ಯತೆ ಇರುತ್ತದೆ. ಹೀಗಾಗಿ, ಜನರ ಹಿತದೃಷ್ಟಿಯಿಂದ ಅವಕಾಶ ಕೊಡುತ್ತಿಲ್ಲ’ ಎಂದು ತಿಳಿಸಿದರು.

ADVERTISEMENT

‘ಮುಂದಿನ ದಿನಗಳಲ್ಲಿ ದೇವಸ್ಥಾನಕ್ಕೆ ಹೆಚ್ಚಿನ ಅನುದಾನ ಒದಗಿಸಲಾಗುವುದು. ಭಕ್ತರಿಗೋಸ್ಕರ 265 ಕೊಠಡಿಗಳ ನಿರ್ಮಾಣ ಕಾಮಗಾಗಿ ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚನೆ ನೀಡಲಾಗಿದೆ’ ಎಂದರು.

ಕಾರ್ಯನಿರ್ವಾಹಕ ಅಧಿಕಾರಿ ರವಿ ಕೋಟಾರಗಸ್ತಿ, ‘ಯಲ್ಲಮ್ಮನಿಗೆ ಎಂದಿನಂತೆ ಅಭಿಷೇಕ, ವಿಶೇಷ ಪೂಜೆ ನೆರವೇರುತ್ತಿದೆ. ಲಾಕ್‌ಡೌನ್ ಪ್ರಾರಂಭ ಆದಾಗಿನಿಂದ ಈವರೆಗೆ ದೇವಸ್ಥಾನಕ್ಕೆ ₹ 8 ಕೋಟಿ ನಷ್ಟವಾಗಿದೆ’ ಎಂದು ತಿಳಿಸಿದರು.

ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಜಿರಗ್ಯಾಳ, ವೆಂಕಟ ಸೂನ್ನದ, ಸವದತ್ತಿ ಎಎಸ್ಐ ಎಸ್.ಆರ್. ಗಿರಿಯಾಲ, ರಾಮಾಚಾರಿ ಲಮಾಣಿ, ಸದಾನಂದ ಈಟಿ, ಈರಣ್ಣ ಕುಲಕರ್ಣಿ, ಪಂಡಿತ ರಾಜಶೇಖರಯ್ಯ, ಮಂಜನಗೌಡ ಸಂದಿಮನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.