ರಾಯಬಾಗ: ‘ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್, ಮಿತಿಮೀರಿದ ಭ್ರಷ್ಟಾಚಾರದಲ್ಲಿ ಮುಳುಗಿದೆ. ರಾಜ್ಯದ ಯಾವುದೇ ಇಲಾಖೆಯಲ್ಲಿ ಸಾರ್ವಜನಿಕರ ಕೆಲಸವಾಗಬೇಕಾದರೆ ಮೊದಲು ಲಂಚಕೋಡಬೇಕಾದ ವಾತಾವರಣವಿದೆ’ ಎಂದು ಶಾಸಕ ಡಿ.ಎಂ. ಐಹೊಳೆ ಹೇಳಿದರು.
ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರದ ವಿರುದ್ಧ ಪಟ್ಟಣದಲ್ಲಿ ಸೋಮವಾರ ಬಿಜೆಪಿಯಿಂದ ನಡೆದ ಬೃಹತ್ ಪ್ರತಿಭಟನೆಯ ಭಾಗವಹಿಸಿ ಅವರು ಮಾತನಾಡಿದರು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ ಮಾತನಾಡಿ, ‘ಕಾಂಗ್ರೆಸ್ ಕಾರ್ಯಕರ್ತರು ಒಂದು ಮನೆ ಹಂಚಿಕೆಗೆ ಫಲಾನುಭವಿಗಳಿಂದ 10ರಿಂದ 15 ಸಾವಿರ ಹಣ ಪಡೆಯುತ್ತಿರುವುದು ನಾಚಿಕೆಗೇಡು. ಕೂಡಲೇ ಇದರ ತನಿಖೆ ನಡೆಸಬೇಕು. ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆಯಾಗಬೇಕು’ ಎಂದರು.
ಪ್ರತಿಭಟನಾಕಾರರು ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು. ನಂತರ ತಹಶೀಲ್ದಾರ್ ಸುರೇಶ ಮುಂಜೆ ಅವರಿಗೆ ಮನವಿ ಸಲ್ಲಿಸಿದರು.
ಮಂಡಲದ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ ಅಪ್ಪಾಜಿಗೋಳ, ಬಿಜೆಪಿ ಮಂಡಲದ ಅಧ್ಯಕ್ಷರಾದ ಪೃಥ್ವಿರಾಜ್ ಜಾಧವ, ಸಿದ್ದು ಮೂಡಲಗಿ, ಮುಖಂಡರಾದ ಮಹೇಶ ಭಾತೆ, ಸದಾಶಿವ ಘೋರ್ಪಡೆ, ರಾಜು ಹರಗಣ್ಣವರ, ಸದಾನಂದ ಹಳಿಂಗಳಿ, ದುಂಡಪ್ಪ ಭೆಂಡವಾಡೆ, ಅಣ್ಣಾಸಾಬ ಖೇಮಲಾಪೂರೆ, ರಾಜಶೇಖರ ಖನದಾಳೆ, ಬಸವರಾಜ ದೋಣವಾಡೆ, ಅಂಕುಶ ಜಾಧವ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.