ಬೆಳಗಾವಿ (ಸುವರ್ಣ ವಿಧಾನಸೌಧ): ರಾಜ್ಯದ ವೈದ್ಯಕೀಯ ಕಾಲೇಜುಗಳಲ್ಲಿ ಪದವಿ ಶಿಕ್ಷಣ ಪೂರೈಸಿ, ಕಡ್ಡಾಯ ಸರ್ಕಾರಿ ಸೇವೆಯಲ್ಲಿ ಕೆಲಸ ಮಾಡುತ್ತಿರುವ ಸಾವಿರಾರು ವೈದ್ಯರಿಗೆ ಆರುತಿಂಗಳಿಂದ ವೇತನ ನೀಡಿಲ್ಲ ಎಂದುಬಿಜೆಪಿಯ ವೈ.ಎ. ನಾರಾಯಣಸ್ವಾಮಿದೂರಿದರು.
ವಿಧಾನ ಪರಿಷತ್‌ನಲ್ಲಿ ಮಂಗಳವಾರ ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ‘ಕೋರ್ಸ್ ಪೂರೈಸಿದ ತಕ್ಷಣವೇ ಕಡ್ಡಾಯ ಸರ್ಕಾರಿ ಸೇವೆಗೆ ನಿಯೋಜಿತರಾದ ವೈದ್ಯರಿಗೆ ವೇತನ ಪಾವತಿಸಲು ಇನ್ನೂ ಹಣ ಬಿಡುಗಡೆ ಮಾಡಿಲ್ಲ. ಇದು ಸರಿಯಲ್ಲ, ಕಡ್ಡಾಯ ಸೇವೆಯಲ್ಲಿರುವ ವೈದ್ಯರಿಗೆವೇತನ ಪಾವತಿಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.