ADVERTISEMENT

ಬೆಳಗಾವಿ: ಸುವರ್ಣ ಸೌಧದಲ್ಲಿ ಗಾಂಧೀಜಿ ಪ್ರತಿಮೆ ಅನಾವರಣಕ್ಕೆ ಕ್ಷಣಗಣನೆ

​ಪ್ರಜಾವಾಣಿ ವಾರ್ತೆ
Published 21 ಜನವರಿ 2025, 4:26 IST
Last Updated 21 ಜನವರಿ 2025, 4:26 IST
   

ಬೆಳಗಾವಿ: ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ನೆನಪಿಗಾಗಿ ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಪ್ರತಿಷ್ಠಾಪಿಸಿದ ಮಹಾತ್ಮ ಗಾಂಧೀಜಿ ಪ್ರತಿಮೆ ಅನಾವರಣಕ್ಕೆ ಕ್ಷಣಗಣನೆ ಆರಂಭವಾಗಿದೆ.

ಮಂಗಳವಾರ ಬೆಳಿಗ್ಗೆ 10.30ಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಮೆ ಅನಾವರಣ ಮಾಡಲಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿವಿಧ ಸಚಿವರು, ಶಾಸಕರು ಪಾಲ್ಗೊಳ್ಳಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಜನಪ್ರತಿನಿಧಿಗಳು, ಸ್ವಾತಂತ್ರ್ಯ ಹೋರಾಟಗಾರರು ಸೌಧದತ್ತ ಆಗಮಿಸುತ್ತಿದ್ದಾರೆ. ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.