ADVERTISEMENT

14 ಮಂದಿ ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 25 ಮೇ 2020, 14:25 IST
Last Updated 25 ಮೇ 2020, 14:25 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಳಗಾವಿ: ಕೋವಿಡ್-19 ಸೋಂಕು ತಗುಲಿದ್ದ 14 ಜನರು ಸಂಪೂರ್ಣ ಗುಣಮುಖರಾಗಿದ್ದು, ಅವರನ್ನು ಸೋಮವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಗಲಕೋಟೆ ಜಿಲ್ಲೆ ಹಾಗೂ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ಸಂಕೇಶ್ವರ, ರಾಯಬಾಗ ತಾಲ್ಲೂಕಿನ 14 ಮಂದಿ ಗುಣಮುಖರಾಗಿದ್ದಾರೆ. ಅವರನ್ನು (ರೋಗಿ ಸಂಖ್ಯೆಗಳಾದ 816, 839, 822, 825, 826, 827, 829, 831, 819, 837, 840, 841, 843, 845) ಮಾರ್ಗಸೂಚಿ ಪ್ರಕಾರ ಬಿಡುಗಡೆ ಮಾಡಲಾಗಿದೆ ಎಂದು ಬಿಮ್ಸ್‌ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT