ADVERTISEMENT

ಕೋವಿಡ್‌: ಸೋಂಕಿತರಿಗಿಂತ ಗುಣಮುಖರಾದವರ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2020, 15:49 IST
Last Updated 8 ಆಗಸ್ಟ್ 2020, 15:49 IST

ಬೆಳಗಾವಿ: ಜಿಲ್ಲೆಯಲ್ಲಿ ಶನಿವಾರ ಹೊಸದಾಗಿ 312 ಜನರಿಗೆ ಕೋವಿಡ್‌–19 ದೃಢಪಟ್ಟಿದೆ. ಇದೇ ವೇಳೆ, 378 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಸೋಂಕಿತರ ಸಂಖ್ಯೆಗಿಂತ ಗುಣಮುಖರಾದವರ ಸಂಖ್ಯೆಯಲ್ಲಿ ಏರಿಕೆಯಾಗಿದೆ.

ಇದುವರೆಗೆ ಸೋಂಕು ತಗುಲಿದವರ ಸಂಖ್ಯೆ 5,174ಕ್ಕೆ ತಲುಪಿದೆ. ಇವರಲ್ಲಿ 3,431 ಸಕ್ರಿಯ ಪ್ರಕರಣಗಳಿವೆ. ಬೆಳಗಾವಿ, ಗೋಕಾಕ, ಖಾನಾಪುರ, ಸವದತ್ತಿ, ಚಿಕ್ಕೋಡಿ, ರಾಮದುರ್ಗ, ಹುಕ್ಕೇರಿ, ರಾಯಬಾಗ ಸೇರಿದಂತೆ ಬಹುತೇಕ ಜಿಲ್ಲೆಯ ಎಲ್ಲ ಭಾಗಗಳಲ್ಲೂ ಸೋಂಕು ಕಂಡುಬಂದಿದೆ.ಬೆಳಗಾವಿಯ 60 ವರ್ಷದ ವೃದ್ಧೆಯೊಬ್ಬರು (ಪಿ– 157344) ಮೃತರಾಗಿದ್ದು, ಸೋಂಕಿನಿಂದ ಮೃತರಾದವರ ಸಂಖ್ಯೆ 94ಕ್ಕೆ ಏರಿಕೆಯಾಗಿದೆ.

378 ಜನರು ಚಿಕಿತ್ಸೆಯಿಂದ ಗುಣಮುಖರಾಗಿದ್ದು, ಇದುವರೆಗೆ ಗುಣಮುಖರಾದವರ ಸಂಖ್ಯೆ 1,649ಕ್ಕೆ ತಲುಪಿದೆ. 328 ಜನರ ಮಾದರಿಯ ಫಲಿತಾಂಶ ಇನ್ನೂ ಬರಬೇಕಾಗಿದೆ.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.