ADVERTISEMENT

ಕೊರೊನಾ: ಸೋಂಕು ನಿವಾರಕ ಸಿಂಪಡಣೆಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2020, 7:53 IST
Last Updated 25 ಮಾರ್ಚ್ 2020, 7:53 IST
ಸೋಂಕು ನಿವಾರಕಗಳನ್ನು ಸಿಂಪಡಿಸುವ ಜಂಟಿ ಕಾರ್ಯಾಚರಣೆ
ಸೋಂಕು ನಿವಾರಕಗಳನ್ನು ಸಿಂಪಡಿಸುವ ಜಂಟಿ ಕಾರ್ಯಾಚರಣೆ   

ಬೆಳಗಾವಿ: ಕೊರೊನಾ ವೈರಾಣು ಸೋಂಕು ಹರಡುವುದನ್ನು ನಿಯಂತ್ರಿಸಲು ನಗರದಲ್ಲಿ ಸೋಂಕು ನಿವಾರಕಗಳನ್ನು ಸಿಂಪಡಿಸುವ ಜಂಟಿ ಕಾರ್ಯಾಚರಣೆಗೆ ಬುಧವಾರ ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ ಚಾಲನೆ ನೀಡಲಾಯಿತು.

ಮಹಾನಗರ ಪಾಲಿಕೆ ಮತ್ತು ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಸಿಬ್ಬಂದಿ ವಾಹನಗಳಲ್ಲಿ ನಗರದಾದ್ಯಂತ ವೃತ್ತಗಳು, ರಸ್ತೆಗಳು ಹಾಗೂ ಬಸ್ ನಿಲ್ದಾಣ ಮೊದಲಾದ ಕಡೆಗಳಲ್ಲಿ ಕಾರ್ಯಾಚರಣೆ ನಡೆಸಲಿದ್ದಾರೆ.

ಮಹಾನಗರ ಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್ ಹಾಗೂ ಅಗ್ನಿಶಾಮಕ ದಳದ ಅಧಿಕಾರಿ ಶಿವಕುಮಾರಸ್ವಾಮಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.