ಬೆಳಗಾವಿ: ‘ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಕೋವಿಡ್-19 ಹೊರತುಪಡಿಸಿ ಇತರ ಆರೋಗ್ಯ ಸಂಬಂಧಿ ಸಮಸ್ಯೆಗಳಿಗೆ ತುರ್ತು ಚಿಕಿತ್ಸೆ ನೀಡಲು ನಿರಾಕರಿಸಿದರೆ ಅಂತಹ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಎಚ್ಚರಿಕೆ ನೀಡಿದರು.
ಇಲ್ಲಿ ಸೋಮವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
‘ತುರ್ತು ಚಿಕಿತ್ಸೆಗೆ ಅಗತ್ಯ ಇರುವವರಿಗೆ ತಪಾಸಣೆ ನಡೆಸಿ ಪ್ರಮಾಣಪತ್ರವನ್ನು ನೀಡಲು ಜಿಲ್ಲೆಗೆ ಮತ್ತೆ 4ಸಾವಿರ ರ‍್ಯಾಪಿಡ್ ಆಂಟಿಜೆನ್ ಕಿಟ್‌ಗಳು ಬಂದಿವೆ. ಪ್ರಮಾಣಪತ್ರ ಪಡೆದ ಬಳಿಕವೂ ಯಾವುದಾದರೂ ಆಸ್ಪತ್ರೆ ಚಿಕಿತ್ಸೆಗೆ ನಿರಾಕರಿಸಿದರೆ ಅಂತಹ ಆಸ್ಪತ್ರೆಗಳ ಬಗ್ಗೆ ಸಾರ್ವಜನಿಕರು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ದೂರು ಕೊಡಬಹುದು’ ಎಂದು ತಿಳಿಸಿದರು.
‘ತುರ್ತು ಚಿಕಿತ್ಸೆಗೆ ಅನುಕೂಲ ಆಗುವಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಸರ್ಕಾರಿ ಆಸ್ಪತ್ರೆಗಳಲ್ಲಿ 15 ನಿಮಿಷಗಳಲ್ಲಿ ತ್ವರಿತವಾಗಿ ಕೋವಿಡ್ ತಪಾಸಣೆ ನಡೆಸಿ ಪ್ರಮಾಣಪತ್ರ ನೀಡಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.