ಬೆಳಗಾವಿ: ‘ಜಿಲ್ಲೆಯಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೋಬಳಿಗಳ ಮಟ್ಟದಲ್ಲೂ ಕೋವಿಡ್ ಕೇರ್ ಸೆಂಟರ್‌ಗಳನ್ನು ಸ್ಥಾಪಿಸಬೇಕು’ ಎಂದು ಯಮಕನಮರಡಿ ಶಾಸಕರೂ ಆಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಒತ್ತಾಯಿಸಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದು, ‘ಎಲ್ಲ ತಾಲ್ಲೂಕು ಆಸ್ಪತ್ರೆಗಳನ್ನೂ ಕೋವಿಡ್ ಆರೋಗ್ಯ ಕೇಂದ್ರಗಳನ್ನಾಗಿ ಪರಿವರ್ತಿಸಿ ಅಗತ್ಯ ಸಿಬ್ಬಂದಿ ಹಾಗೂ ಸಲಕರಣೆಗಳನ್ನು ಪೂರೈಸಬೇಕು. ಚಿಕ್ಕೋಡಿ ಮತ್ತು ಗೋಕಾಕದಲ್ಲಿ ಕೊರೊನಾ ಪರೀಕ್ಷಾ ಪ್ರಯೋಗಾಲಯಗಳನ್ನು ಆರಂಭಿಸಬೇಕು. ಪ್ರತಿ ತಾಲ್ಲೂಕಿಗೆ ಹೆಚ್ಚುವರಿಯಾಗಿ 2 ಆ್ಯಂಬುಲೆನ್ಸ್‌ಗಳನ್ನು ಒದಗಿಸಿ ಕೊರತೆ ನಿವಾರಿಸಬೇಕು. ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಎಲ್ಲ ಹಂತದ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು’ ಎಂದು ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.