ಬೆಳಗಾವಿ: ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ನಿಧನದ ಗೌರವಾರ್ಥವಾಗಿ ಇಂದು (ಗುರುವಾರ) ರಾಜ್ಯದಾದ್ಯಂತ ಶೋಕ ಆಚರಿಸಲಾಗುವುದು.
ಈ ಅವಧಿಯಲ್ಲಿ ಯಾವುದೇ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ ಹಾಗೂ ನಿಯತವಾಗಿ ರಾಷ್ಟ್ರಧ್ವಜವನ್ನು ಹಾರಿಸುವ ಸರ್ಕಾರದ ಎಲ್ಲ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ಅಧೀನ ಕಾರ್ಯದರ್ಶಿ ಮೊಹಮದ್ ಮೊಮಿನ್ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.