ADVERTISEMENT

ಬೆಳಗಾವಿಯ ಜೈನ ಕಾಲೇಜಿನಲ್ಲಿ ಕೋವಿಡ್ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2020, 7:18 IST
Last Updated 19 ನವೆಂಬರ್ 2020, 7:18 IST
ಬೆಳಗಾವಿಯ ಜೈನ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ಕೋವಿಡ್–19 ಪರೀಕ್ಷೆಗೆ ಒಳಪಡಿಸಲಾಯಿತು
ಬೆಳಗಾವಿಯ ಜೈನ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ಕೋವಿಡ್–19 ಪರೀಕ್ಷೆಗೆ ಒಳಪಡಿಸಲಾಯಿತು   

ಬೆಳಗಾವಿ: ಇಲ್ಲಿನ ಜೈನ ಎಂಜಿನಿಯರಿಂಗ್ ಕಾಲೇಜನ್ನು ಕೋವಿಡ್–19 ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಪುನರಾರಂಭಿಸಲಾಗಿದೆ.

ಕಾಲೇಜಿನ ಎನ್‌ಎಸ್‌ಎಸ್‌ ಘಟಕ ಹಾಗೂ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಯನ್ನು ಮಂಗಳವಾರ ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಯಿತು. 150 ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯ ಗಂಟಲು ಅಥವಾ ಮೂಗಿನ ದ್ರವ ಸಂಗ್ರಹಿಸಿ ಪರೀಕ್ಷಿಸಲಾಯಿತು. ಕೋವಿಡ್ ನೆಗೆಟಿವ್ ಬಂದ ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ಬೋಧನಾ ಚಟುವಟಿಕೆ ಆರಂಭಿಸಲಾಯಿತು.

ಪ್ರಾಂಶುಪಾಲ ಹಾಗೂ ನಿರ್ದೇಶಕ ಡಾ.ಕೆ.ಜಿ. ವಿಶ್ವನಾಥ ಮಾತನಾಡಿ, ‘ಆನ್‌ಲೈನ್‌ನಲ್ಲೇ ಪಾಠ ಕೇಳಲು ಬಯಸುವ ವಿದ್ಯಾರ್ಥಿಗಳಿಗೆ ಬೋಧನೆ ಮುಂದುವರಿಸಲಾಗಿದೆ. ಕಾಲೇಜಿಗೆ ಬರುವವರಿಗೂ ಅವಕಾಶವಿದೆ. ಎಲ್ಲರೂ ಮಾಸ್ಕ್‌ ಧರಿಸುವುದು ಹಾಗೂ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ಬೋಧಕರು ಫೇಸ್ ಶೀಲ್ಡ್‌ಗಳನ್ನು ಧರಿಸಬೇಕು. ಶೇ 50ರಷ್ಟು ವಿದ್ಯಾರ್ಥಿಗಳು ನಿಗದಿಪಡಿಸಿದ ಸಮಯ ಮತ್ತು ಬ್ಯಾಚ್‌ಗಳಲ್ಲಿ ತರಗತಿಗಳಿಗೆ ಹಾಜರಾಗಬೇಕಾಗುತ್ತದೆ’ ಎಂದು ತಿಳಿಸಿದರು.

ADVERTISEMENT

ಡೀನ್ (ಅಕಾಡೆಮಿಕ್ಸ್) ಪ್ರೊ.ಪ್ರವೀಣ ಚಿಟ್ಟಿ ಹಾಗೂ ಎನ್‌ಎಸ್‌ಎಸ್‌ ಸಂಯೋಜನಾಧಿಕಾರಿ ಪ್ರೊ.ವಿನಾಯಕ ನಾನ್ನೋಜಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.