ಬೆಳಗಾವಿ: ಕೋವಿಡ್–19 ಲಸಿಕಾಕರಣದ ಬಗ್ಗೆ ಜನಾ ಜಾಗೃತಿ ಮೂಡಿಸಲು ಹಮ್ಮಿಕೊಂಡಿರುವ ‘ಲಸಿಕಾ ಉತ್ಸವ’ಕ್ಕೆ ಭಾನುವಾರ ಚಾಲನೆ ನೀಡಲಾಯಿತು.
ಏ. 14ರವರೆಗೆ ನಡೆಯುವ ಉತ್ಸವದ ಅಂಗವಾಗಿ ವಡಗಾವಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಲಸಿಕಾ ಅಧಿಕಾರಿ ಡಾ.ಐ.ಪಿ. ಗಡದಾ ಮಾತನಾಡಿ, ‘45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. ಯಾವುದೇ ಅಡ್ಡ ಪರಿಣಾಮಗಳು ಇರುವುದಿಲ್ಲ. ಲಸಿಕೆ ಉತ್ತಮವಾಗಿದೆ. ಹಾಕಿಸಿಕೊಳ್ಳುವ ಮೂಲಕ ಕೋವಿಡ್ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕು’ ಎಂದು ಕೋರಿದರು.
ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಶಿವಾನಂಶದ ಮಾಸ್ತಿಹೋಳಿ, ವೈದ್ಯಾಧಿಕಾರಿ ಡಾ.ಪ್ರಕಾಶ ವಾಲಿ, ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ಮಹಾದೇವಿ ಶಿವಮೂರ್ತಿಮಠ ಹಾಗೂ ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.