ADVERTISEMENT

ಬೆಳಗಾವಿ: ಕೋವಿಡ್‌–19 ಐವರು ಗುಣಮುಖ

​ಪ್ರಜಾವಾಣಿ ವಾರ್ತೆ
Published 2 ಮೇ 2020, 12:22 IST
Last Updated 2 ಮೇ 2020, 12:22 IST
ಕೋವಿಡ್‌–19 ರೋಗಿಗಳ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆ– ಸಂಗ್ರಹ ಚಿತ್ರ
ಕೋವಿಡ್‌–19 ರೋಗಿಗಳ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆ– ಸಂಗ್ರಹ ಚಿತ್ರ   

ಬೆಳಗಾವಿ: ಕೋವಿಡ್-19 ಸೋಂಕಿನ ಗುಣಮುಖ ನಾಲ್ವರು ಮಹಿಳೆಯರೂ ಸೇರಿದಂತೆ ಐದು ಜನರು ಶನಿವಾರ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರು ಎಂದು ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಬಿಮ್ಸ್) ನಿರ್ದೇಶಕ ಡಾ.ವಿನಯ ದಾಸ್ತಿಕೊಪ್ಪ ತಿಳಿಸಿದರು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯ ನಾಲ್ವರು ಮಹಿಳೆಯರು ಪಿ- 282, ಪಿ-285, ಪಿ-286 ಮತ್ತು ಪಿ-288 ಹಾಗೂ ಒಬ್ಬ ಪುರುಷ ಪಿ- 283 ಬಿಡುಗಡೆ ಹೊಂದಿದರು.

ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 73 ಜನರಲ್ಲಿ ಸೋಂಕು ಪತ್ತೆಯಾಗಿತ್ತು. ಅದರಲ್ಲಿ 15 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ. ಇನ್ನುಳಿದವರಿಗೆ ಚಿಕಿತ್ಸೆ ಮುಂದುವರಿದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.