ADVERTISEMENT

ಅಪರಾಧ ತಡೆಗೆ ಎಲ್ಲರ ಸಹಕಾರ ಅಗತ್ಯ: ಎಸ್ಪಿ ಲಕ್ಷ್ಮಣ ನಿಂಬರಗಿ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2021, 14:38 IST
Last Updated 13 ನವೆಂಬರ್ 2021, 14:38 IST
ಬೆಳಗಾವಿಯಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಶನಿವಾರ ಆರಂಭವಾದ ಕ್ರಿಕೆಟ್ ಟೂರ್ನಿಯನ್ನು ಎಸ್ಪಿ ಲಕ್ಷ್ಮಣ ನಿಂಬರಗಿ ಉದ್ಘಾಟಿಸಿದರು
ಬೆಳಗಾವಿಯಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಶನಿವಾರ ಆರಂಭವಾದ ಕ್ರಿಕೆಟ್ ಟೂರ್ನಿಯನ್ನು ಎಸ್ಪಿ ಲಕ್ಷ್ಮಣ ನಿಂಬರಗಿ ಉದ್ಘಾಟಿಸಿದರು   

ಬೆಳಗಾವಿ: ‘ಅಪರಾಧ ಚಟುವಟಿಕೆಗಳನ್ನು ತಡೆಯಲು ಸಮಾಜದ ಎಲ್ಲರ ಸಹಕಾರ ಅಗತ್ಯ’ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು.

ಅಪರಾಧ ತಡೆ ಮಾಸಾಚರಣೆ ಮತ್ತು ಮಾದಕ ದ್ರವ್ಯ ವಿರೋಧಿ ದಿನಾಚರಣೆ ನಿಮಿತ್ತ ಜಿಲ್ಲಾ ಪೊಲೀಸ್ ವತಿಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸರು, ವೈದ್ಯರು, ನಗರಪಾಲಿಕೆ ಅಧಿಕಾರಿ–ಸಿಬ್ಬಂದಿ, ಪತ್ರಕರ್ತರು ಹಾಗೂ ವಿವಿಧ ಇಲಾಖೆ ಅಧಿಕಾರಿ–ಸಿಬ್ಬಂದಿಗೆ ಆಯೋಜಿಸಿರುವ ಕ್ರಿಕೆಟ್ ಪಂದ್ಯಾವಳಿಯನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಪೊಲೀಸ್ ಇಲಾಖೆಯಿಂದ ಮಾತ್ರವೇ ಅಪರಾಧಗಳನ್ನು ತಡೆಗಟ್ಟಲು ಸಾಧ್ಯವಾಗುವುದಿಲ್ಲ. ಸಮಾಜದ ಪ್ರತಿಯೊಬ್ಬ ವ್ಯಕ್ತಿಯೂ ಸಹಕಾರ ಕೊಡಬೇಕಾಗುತ್ತದೆ. ಹೀಗಾಗಿ, ಜಾಗೃತಿ ಮೂಡಿಸುವ ಚಟುವಟಿಕೆಯ ಭಾಗವಾಗಿ ಕ್ರಿಕೆಟ್ ಟೂರ್ನಿ ನಡೆಸಲಾಗುತ್ತಿದೆ’ ಎಂದರು.

ADVERTISEMENT

‘ಮಾದಕ ದ್ರವ್ಯಗಳಿಂದ ಆಗುವ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಬೇಕಾಗಿದೆ’ ಎಂದು ಹೇಳಿದರು.

‘ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿಯಾಗಿದೆ’ ಎಂದರು.

ಎಎಸ್ಪಿ ಅಮರನಾಥ್ ರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ್ ಘಾಳಿ, ಪತ್ರಕರ್ತ ದಿಲೀಪ್ ಕುರಂದವಾಡೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.