ಬೆಳಗಾವಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಮಹಾರಾಷ್ಟ್ರದ ಸಾಚೆನ್ನಿಕೊಪ್ಪಿ ನಿವಾಸಿ ಸ್ವಪ್ನಲ್ ರಾಜಾರಾಮ ಮಾಣೇ (23) ಎಂಬ ಅಪರಾಧಿಗೆ ಇಲ್ಲಿನ ಜಿಲ್ಲಾ ಪೋಕ್ಸೊ ನ್ಯಾಯಾಲಯವರು 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹1 ಲಕ್ಷ ದಂಡ ವಿಧಿಸಿದೆ.
ಚಿಕ್ಕೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬಾಲಕಿಯೊಬ್ಬಳನ್ನು ಪುಸಲಾಯಿಸಿದ ಸ್ವಪ್ನಲ್ ಆಕೆಯ ಜತೆಗೆ ಲೈಂಗಿಕ ಸಂಪರ್ಕ ಬೆಳೆಸಿದ್ದ. ಬಾಲಕಿಯ ಜತೆಗಿದ್ದ ನಗ್ನ ಫೋಟೊಗಳನ್ನು ತೆಗೆದು ಆಕೆಯ ಪಾಲಕರ ಮೊಬೈಲ್‌ಗೆ ಕಳುಹಿಸಿದ್ದ. ಮದುವೆ ಆಗುವುದಾಗಿ ನಂಬಿಸಿದ್ದ ಈತನ ನಂಬಿದ ಬಾಲಕಿ ಪದೇಪದೇ ದೌರ್ಜನ್ಯಕ್ಕೆ ಒಳಗಾಗಿದ್ದಳು.
ಆಕೆಯ ಪಾಲಕರು ನೀಡಿದ ದೂರಿನ ಮೇರೆಗೆ ಪಿಎಸ್‌ಐ ಬಸಗೌಡ ಎಸ್. ನೇರ್ಲಿ ಹಾಗೂ ತನಿಖಾಧಿಕಾರಿ ವಿಶ್ವಂತ ಚೌಗಲೆ ಅವರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ವಿಶೇಷ ಶೀಘ್ರಗತಿ ಪೋಕ್ಸೊ ನ್ಯಾಯಾಲಯ–1ರ ನ್ಯಾಯಾಧೀಶರಾದ ಸಿ.ಎಂ.ಪುಷ್ಪಲತಾ ಅವರು ತೀರ್ಪು ಪ್ರಕಟಿಸಿದ್ದಾರೆ.
ಬಾಲಕಿಗೆ ಕಾನೂಣು ಸೇವಾ ಪ್ರಾಧಿಕಾರದಿಂದ ₹4 ಲಕ್ಷ ಪರಿಹಾರ ಕೂಡ ಘೋಷಣೆ ಮಾಡಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್.ಎ. ಪಾಟೀಲ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.