ADVERTISEMENT

ಉದ್ಯಮಿ ಹತ್ಯೆ: ನಾಲ್ಕನೇ ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2024, 16:02 IST
Last Updated 22 ಅಕ್ಟೋಬರ್ 2024, 16:02 IST

ಬೆಳಗಾವಿ: ಇಲ್ಲಿನ ರಿಯಲ್‌ ಎಸ್ಟೇಟ್‌ ಉದ್ಯಮಿ ಸಂತೋಷ ದುಂಡಪ್ಪ ಪದ್ಮಣ್ಣವರ (47) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ಕನೇ ಆರೋಪಿಯನ್ನು ಸೋಮವಾರ ಬಂಧಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡದ ಮಂಜುನಾಥ ಬಸಪ್ಪ ಜೇರಕಲ (31) ಬಂಧಿತ. ಈ ಹಿಂದೆ ಮುಖ್ಯ ಆರೋಪಿ, ಉದ್ಯಮಿಯ ಪತ್ನಿ ಉಮಾ (41), ಅವರ ಫೇಸ್‌ಬುಕ್‌ ಸ್ನೇಹಿತ, ಕೊಡಗು ಜಿಲ್ಲೆಯ ಶನಿವಾರಸಂತೆ ಗ್ರಾಮದ ಶೋಭಿತ್‌ ಗೌಡ (30) ಮತ್ತು ಪವನ್‌ (27) ಅವರನ್ನು ಬಂಧಿಸಲಾಗಿತ್ತು.

‘ಮಂಗಳವಾರ ನಾಲ್ವರೂ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದೇವೆ. ಮುಂದಿನ ನಾಲ್ಕು ದಿನಗಳವರೆಗೆ ವಿಚಾರಣೆಗಾಗಿ ಅವರನ್ನು ಪೊಲೀಸ್‌ ಕಸ್ಟಡಿಗೆ ಕೊಡಲಾಗಿದೆ’ ಎಂದು ಮಾಳಮಾರುತಿ ಠಾಣೆ ಇನ್‌ಸ್ಪೆಕ್ಟರ್‌ ಜೆ.ಎಂ.ಕಾಲಿಮಿರ್ಚಿ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.