ADVERTISEMENT

ಭದ್ರತಾ ಲೋಪ: ಇನ್‌ಸ್ಪೆಕ್ಟರ್‌ ಮುಲ್ಲಾ ಅಮಾನತು

​ಪ್ರಜಾವಾಣಿ ವಾರ್ತೆ
Published 8 ಮೇ 2025, 15:27 IST
Last Updated 8 ಮೇ 2025, 15:27 IST
ಅಲ್ತಾಫ್‌ಹುಸೇನ್‌ ಮುಲ್ಲಾ
ಅಲ್ತಾಫ್‌ಹುಸೇನ್‌ ಮುಲ್ಲಾ   

ಬೆಳಗಾವಿ:  ಇತ್ತೀಚೆಗೆ ಇಲ್ಲಿ ನಡೆದ ಕಾಂಗ್ರೆಸ್‌ ಪ್ರತಿಭಟನಾ ಸಮಾವೇಶದಲ್ಲಿ ಭದ್ರತಾ ಲೋಪಕ್ಕೆ ಕಾರಣವಾದ ಆರೋಪದಡಿ ಕ್ಯಾಂಪ್ ಠಾಣೆ ಪೊಲೀಸ್‌ ಇನ್‌ಸ್ಪೆಕ್ಟರ್‌ ಅಲ್ತಾಫ್‌ ಹುಸೇನ್ ಮುಲ್ಲಾ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಅಂದು ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಷಣ ಮಾಡುವಾಗ, ಬಿಜೆಪಿ ಕಾರ್ಯಕರ್ತೆಯರು ಕಪ್ಪುಬಟ್ಟೆ ಪ್ರದರ್ಶಿಸಿದ್ದರು. ‘ಈ ಬಗ್ಗೆ ಈಗಾಗಲೇ ಇಬ್ಬರು ಕಾನ್‌ಸ್ಟೆಬಲ್‌ಗಳನ್ನು ಅಮಾನತುಪಡಿಸಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT