ADVERTISEMENT

ಬೆಳೆ ವಿಮೆಗೆ ನೋಂದಣಿ: ರೈತರಿಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 29 ಮೇ 2019, 13:44 IST
Last Updated 29 ಮೇ 2019, 13:44 IST

ಬೆಳಗಾವಿ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು, ತಾಲ್ಲೂಕಿನ ಪ್ರಮುಖ ಬೆಳೆಗಳನ್ನು ಗ್ರಾಮ ಪಂಚಾಯ್ತಿ ಮಟ್ಟಕ್ಕೆ ಹಾಗೂ ಉಳಿದ ಬೆಳೆಗಳನ್ನು ಹೋಬಳಿ ಮಟ್ಟದಲ್ಲಿ ಅಧಿಸೂಚಿಸಲಾಗಿದೆ.

ನಿರ್ದಿಷ್ಟ ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂ ಕುಸಿತ ಮತ್ತು ಬೆಳೆ ಮುಳುಗಡೆ ಹಾಗೂ ಕೀಟ, ರೋಗ ಭಾದೆಗಳಿಂದ ಅಧಿಸೂಚಿತ ಬೆಳೆ ವಿಫಲವಾದಾಗ ವಿಮಾ ರಕ್ಷಣೆ ಸಿಗಲಿದೆ.

ಮಳೆ ಅಭಾವ ಅಥವಾ ಇತರ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಅಧಿಸೂಚಿತ ಘಟಕದಲ್ಲಿ ಶೇ. 75ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡಲ್ಲಿ, ಕಟಾವಿನ ನಂತರ ಜಮೀನಿನಲ್ಲಿ ಒಣಗಲು ಬಿಟ್ಟ ಸಂದರ್ಭದಲ್ಲಿ 2 ವಾರಗಳೊಳಗೆ ಚಂಡಮಾರುತ, ಚಂಡಮಾರುತಸಹಿತ ಮಳೆ ಮತ್ತು ಅಕಾಲಿಕ ಮಳೆಯಿಂದಾಗಿ ನಾಶವಾದರೆ ವೈಯಕ್ತಿಕವಾಗಿ ವಿಮಾ ಸಂಸ್ಥೆಯು ನಷ್ಟ ನಿರ್ಧಾರ ಮಾಡಿ ಪರಿಹಾರ ಒದಗಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ.

ADVERTISEMENT

ರೈತರು ಬೆಳೆ ವಿಮೆ ಯೋಜನೆಯಲ್ಲಿ ಪಾಲ್ಗೊಂಡು ಅಧಿಸೂಚಿತ ಬೆಳೆಗಳಿಗೆ ವಿಮಾ ರಕ್ಷಣೆ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್. ವಿಶಾಲ್‌ ತಿಳಿಸಿದ್ದಾರೆ.

ಬೆಳೆ ಸಾಲ ಪಡೆದ ರೈತರಿಗೆ ಬೆಳೆ ವಿಮೆ ಕಡ್ಡಾಯವಾಗಿರುತ್ತದೆ. ಬೆಳೆ ಸಾಲ ಪಡೆಯದವರು ತಮ್ಮ ವ್ಯಾಪ್ತಿಯ ಬ್ಯಾಕ್, ಸಹಕಾರಿ ಸಂಘ– ಶಾಖೆಗಳಿಗೆ ಭೇಟಿ ನೀಡಿ ತಾಲ್ಲೂಕಿಗೆ ಅಧಿಸೂಚಿತವಾದ ಬೆಳೆಗಳಲ್ಲಿ ಕಂತು ಪಾವತಿಸಿ ಯೋಜನೆಯಲ್ಲಿ ಪಾಲ್ಗೊಳ್ಳಬಹುದು. ತಾಲ್ಲೂಕುಗಳಲ್ಲಿ ಸಾಮಾನ್ಯ ಸೇವಾ ಕೇಂದ್ರಗಳಲ್ಲಿಯೂ ಸೇವೆ ಪಡೆಯಬಹುದು.

ಹೆಚ್ಚಿನ ಮಾಹಿತಿಗೆ ಸಾಮಾನ್ಯ ಸೇವಾ ಕೇಂದ್ರಗಳ ಜಿಲ್ಲಾ ವ್ಯವಸ್ಥಾಪಕ ವೀರೇಶ ಪುರಾಣಿಕಮಠ - 90085 93066, ಪ್ರತಿನಿಧಿ ಪಂಚಾಕ್ಷರಿ ಈಳಿಗೇರ 74066 02008, ವಿಮಾ ಸಂಸ್ಥೆ ಪ್ರತಿನಿಧಿಗಳಾದ ಪರಶುರಾಮ 95912 38940, 87626 30722, ವಿನಾಯಕ ಆರ್. ಪಾವಾಡಿ 86602 93948 ಸಂಪರ್ಕಿಸಬಹುದು. ಪ್ರಸಕ್ತ ಹಂಗಾಮಿನಲ್ಲಿ ರೈತರು ಹೆಸರು ನೋಂದಣಿಗೆ ಮಳೆ ಆಶ್ರಿತ ಬೆಳೆಗೆ ಜುಲೈ 16 ಹಾಗೂ ಉಳಿದ ಎಲ್ಲಾ ಅಧಿಸೂಚಿತ ಬೆಳೆಗಳಿಗೆ ಜುಲೈ 31 ಕೊನೆಯ ದಿನವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.