ADVERTISEMENT

ಜತ್ತ ಬಳಿ ಕ್ರೂಸರ್ ವಾಹನ ಪಲ್ಟಿ: ಅಥಣಿಯ ಮೂವರು ಮಹಿಳೆಯರ ಸಾವು

ಶನಿವಾರ ಮಹಾರಾಷ್ಟ್ರದ ಜತ್ತ ಬಳಿ ಕ್ರೂಸರ್ ವಾಹನ ಪಲ್ಟಿಯಾಗಿ ಅಥಣಿ ತಾಲ್ಲೂಕಿನ ಬಳ್ಳಿಗೇರಿಯ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ.

​ಪ್ರಜಾವಾಣಿ ವಾರ್ತೆ
Published 11 ಮೇ 2024, 9:30 IST
Last Updated 11 ಮೇ 2024, 9:30 IST
<div class="paragraphs"><p>ಜತ್ತ ಬಳಿ ಕ್ರೂಸರ್ ವಾಹನ ಪಲ್ಟಿ: ಅಥಣಿಯ ಮೂವರು ಮಹಿಳೆಯರ ಸಾವು</p></div>

ಜತ್ತ ಬಳಿ ಕ್ರೂಸರ್ ವಾಹನ ಪಲ್ಟಿ: ಅಥಣಿಯ ಮೂವರು ಮಹಿಳೆಯರ ಸಾವು

   

ಚಿಕ್ಕೋಡಿ/ಅಥಣಿ: ಶನಿವಾರ ಮಹಾರಾಷ್ಟ್ರದ ಜತ್ತ ಬಳಿ ಕ್ರೂಸರ್ ವಾಹನ ಪಲ್ಟಿಯಾಗಿ ಅಥಣಿ ತಾಲ್ಲೂಕಿನ ಬಳ್ಳಿಗೇರಿಯ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ.

ಮಹಾದೇವಿ ಚೌಗಲಾ, ಗೀತಾ ದೊಡಮನಿ, ಕಸ್ತೂರಿ ಮೃತರು. ಇವರೆಲ್ಲರೂ ಕೆಲಸಕ್ಕಾಗಿ ಮಹಾರಾಷ್ಟ್ರಕ್ಕೆ ಹೊರಟಿಟ್ದರು. ಕ್ರೂಸರ್ ವಾಹನದ ಎಡಬದಿಯ ಟೈಯರ್‌ ಸ್ಫೋಟಗೊಂಡು ಅಪ‍ಘಾತ ಸಂಭವಿಸಿದೆ.

ADVERTISEMENT

ಇದೇ ವಾಹನದಲ್ಲಿ ಸಂಚರಿಸುತ್ತಿದ್ದ ಹಲವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯಿಂದಾಗಿ ಬಳ್ಳಿಗೇರಿಯಲ್ಲಿ ನೀರವ ಮೌನ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.