ಬೆಳಗಾವಿ: ಸಿ.ಟಿ.ರವಿ ಅವರ ಅರ್ಜಿ ವಿಚಾರಣೆ ನಂತರ ನ್ಯಾಯಾಲಯವು ತೀರ್ಪನ್ನು ಮಧ್ಯಾಹ್ನ 3 ಗಂಟೆಗೆ ಕಾಯ್ದಿರಿಸಿದೆ.
ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರಾದ ಸ್ಪರ್ಶ ಡಿಸೋಜಾ ಅಚರು ತೀರ್ಪನ್ನು ಮಧ್ಯಾಹ್ನ 3 ಗಂಟೆಗೆ ಪ್ರಕಟಿಸುವುದಾಗಿ ತಿಳಿಸಿದರು.
ಬಿಜೆಪಿ ಮುಖಂಡರು ಹಾಗೂ ವಕೀಲರೊಂದಿಗೆ ಚರ್ಚೆ ನಡೆಸಿದರು. ನ್ಯಾಯಾಲಯದ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಜಮಾಯಿಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಇನ್ನು ಸಿ.ಟಿ.ರವಿ ಅವರ ಮೇಲಿನ ಹಲ್ಲೆ ಖಂಡಿಸಿ ವಿಜಯೇಂದ್ರ ನೇತೃತ್ವದಲ್ಲಿ ಬೆಳಗಾವಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆಗೆ ಬಿಜೆಪಿ ಕಾರ್ಯಕರ್ತರು ಮುಂದಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.