ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ನ.29ರಂದು ಜಿಲ್ಲೆಯ ವಿಧಾನಪರಿಷತ್ ಚುನಾವಣಾ ಅಖಾಡಕ್ಕೆ ಧುಮುಕಲಿದ್ದಾರೆ.
ನ.28ರಂದು ರಾತ್ರಿ ನಗರಕ್ಕೆ ಬಂದು ತಂಗುವರು. 29ರಂದು ಬೆಳಿಗ್ಗೆ 9ರಿಂದ ಪಕ್ಷದ ಮುಖಂಡರೊಂದಿಗೆ ಚರ್ಚಿಸುವರು. ಮಧ್ಯಾಹ್ನ 2ಕ್ಕೆ ವಿಜಯಪುರಕ್ಕೆ ತೆರಳುವರು.
ಈ ನಡುವೆ, ಶಾಸಕ ಎನ್.ಎ. ಹ್ಯಾರಿಸ್ ಅವರನ್ನು ಚುನಾವಣಾ ವೀಕ್ಷಕರನ್ನಾಗಿ ಕೆಪಿಸಿಸಿಯಿಂದ ನೇಮಕ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.