ADVERTISEMENT

ಬೆಳಗಾವಿ: ಸಚಿವ ಸ್ಥಾನದಿಂದ ಅಮಿತ್‌ ಶಾ ವಜಾಗೊಳಿಸಲು ದಸಂಸ ಆಗ್ರಹ

ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 4 ಜನವರಿ 2025, 14:22 IST
Last Updated 4 ಜನವರಿ 2025, 14:22 IST
ಬೆಳಗಾವಿಯ ರಾಣಿ ಚನ್ನಮ್ಮನ ವೃತ್ತದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಶನಿವಾರ ಪ್ರತಿಭಟಿಸಿದರು
ಬೆಳಗಾವಿಯ ರಾಣಿ ಚನ್ನಮ್ಮನ ವೃತ್ತದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಶನಿವಾರ ಪ್ರತಿಭಟಿಸಿದರು   

ಬೆಳಗಾವಿ: ‘ಅಂಬೇಡ್ಕರ್‌ ಕುರಿತಾಗಿ ಆಕ್ಷೇಪಾರ್ಹ ಹೇಳಿಕೆ ಕೊಟ್ಟ ಅಮಿತ್‌ ಶಾ ಅವರನ್ನು ಕೇಂದ್ರ ಸಚಿವ ಸ್ಥಾನದಿಂದ ವಜಾಗೊಳಿಸಬೇಕು’ ಎಂದು ಆಗ್ರಹಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ಅಂಬೇಡ್ಕರ್ ಉದ್ಯಾನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ಅಮಿತ್ ಶಾ ಪ್ರತಿಕೃತಿ ದಹಿಸಿ ತಮ್ಮ ಆಕ್ರೋಶ ಹೊರಹಾಕಿದರು.

‘ಅಂಬೇಡ್ಕರ್‌ ಸಂವಿಧಾನ ರಚಿಸಿ ದೇಶಕ್ಕೆ ತಮ್ಮದೇಯಾದ ಕೊಡುಗೆ ಕೊಟ್ಟಿದ್ದಾರೆ. ಅವರ ಕುರಿತಾಗಿ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ನೀಡಿದ್ದು ಖಂಡನೀಯ‌. ತಕ್ಷಣವೇ ಅವರು ದೇಶದ ಜನರ ಕ್ಷಮೆಯಾಚಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಮುಖಂಡರಾದ ಸಿದ್ದಪ್ಪ ಕಾಂಬಳೆ, ಮಹಾಂತೇಶ ತಳವಾರ, ಮಾರುತಿ ಕಾಂಬಳೆ, ಮಹದೇವ ತಳವಾರ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.