ADVERTISEMENT

ದಲಿತ ಯುವಕನ ಕೊಲೆ: ಸಿಪಿಐ(ಎಂ) ಖಂಡನೆ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2024, 13:43 IST
Last Updated 27 ಆಗಸ್ಟ್ 2024, 13:43 IST
ರಾಮದುರ್ಗದಲ್ಲಿ ತಹಶೀಲ್ದಾರ್‌ ಕಚೇರಿಗೆ ಸಿಪಿಐ (ಎಂ) ಪಕ್ಷದ ಕಾರ್ಯಕರ್ತರು ಸೋಮವಾರ ಮನವಿ ಸಲ್ಲಿಸಿದರು
ರಾಮದುರ್ಗದಲ್ಲಿ ತಹಶೀಲ್ದಾರ್‌ ಕಚೇರಿಗೆ ಸಿಪಿಐ (ಎಂ) ಪಕ್ಷದ ಕಾರ್ಯಕರ್ತರು ಸೋಮವಾರ ಮನವಿ ಸಲ್ಲಿಸಿದರು   

ರಾಮದುರ್ಗ: ಕ್ಷೌರ ಮಾಡುವ ವಿಚಾರದಲ್ಲಿ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲ್ಲೂಕಿನ ಸಂಗನಾಳ ಗ್ರಾಮದಲ್ಲಿ ನಡೆದಿರುವ ಪರಿಶಿಷ್ಟ ಜಾತಿ ಯುವಕ ಯಮನೂರಪ್ಪ ಅವರ ಕೊಲೆ ಪ್ರಕರಣವನ್ನು ಖಂಡಿಸಿ ಸಿಪಿಐ(ಎಂ) ಪಕ್ಷದ ಕಾರ್ಯಕರ್ತರು ಪ್ರತಿಭಟಿಸಿ ತಹಶೀಲ್ದಾರ್‌ ಕಚೇರಿಗೆ ಸೋಮವಾರ ಮನವಿ ಸಲ್ಲಿಸಿದರು.

ಈ ಕೊಲೆ ಪ್ರಕರಣವು ಜಾತಿ, ದೌರ್ಜನ್ಯ ಹಾಗೂ ಅಸ್ಪೃಶ್ಯತೆಗೆ ಕರಾಳ ಕಾರ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಘಟನೆಯನ್ನು  ಖಂಡಿಸಿದರು.

ಕೊಲೆ ಮಾಡಿದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ನೀಡಬೇಕು. ಕೊಲೆಗೀಡಾದವರ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ADVERTISEMENT

ಸಿಪಿಐ(ಎಂ) ಪಕ್ಷದ ಜಿಲ್ಲಾ ಕಾರ್ಯದರ್ಶಿ ಜಿ.ಎಂ. ಜೈನೆಖಾನ್, ಮುಖಂಡ ನಾಗಪ್ಪ ಸಂಗೊಳ್ಳಿ, ತುಳಸಮ್ಮ ಮಾಳದಕರ, ಮೀನಾಕ್ಷಿ ಸಂಶಿ, ರಾಚವ್ವ ರಾಮದುರ್ಗ, ಫಾರೂಖ್ ಶೇಖ್ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.