ಬೆಳಗಾವಿ: ಜಿಲ್ಲೆಯ ಸವದತ್ತಿಯ ಸುಕ್ಷೇತ್ರ ರೇಣುಕಾ ಯಲ್ಲಮ್ಮದೇವಿ, ಜೋಗುಳಬಾವಿ ಸತ್ತೆಮ್ಮದೇವಿ ಮತ್ತು ರಾಯಬಾಗ ತಾಲ್ಲೂಕಿನ ಚಿಂಚಲಿ ಮಾಯಕ್ಕದೇವಿ ದೇವಸ್ಥಾನಗಳಲ್ಲಿ ಸಾರ್ವಜನಿಕ ದರ್ಶನವನ್ನು ಅ.31ರವರೆಗೆ ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ.
‘ಕೊರೊನಾ ಸೋಂಕು ಹರಡದಂತೆ ನಿಯಂತ್ರಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಈ ದೇವಸ್ಥಾನಗಳ ಆಡಳಿತ ಮಂಡಳಿಯವರು ನಿತ್ಯದ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಲು ಷರತ್ತಿಗೆ ಒಳಪಟ್ಟು ವಿನಾಯಿತಿ ನೀಡಲಾಗಿದೆ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕೊರೊನಾ ಕಾರಣದಿಂದ ಈ ದೇವಸ್ಥಾನಗಳಲ್ಲಿ ಸಾರ್ವಜನಿಕ ದರ್ಶನವನ್ನು ಮಾರ್ಚ್ 18ರಿಂದ ನಿಷೇಧಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.