ಚಿಕ್ಕೋಡಿ: ಬೆಳಗಾವಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಪುರುಷ ಮತ್ತು ಮಹಿಳೆಯರಿಗಾಗಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ.6 ಮತ್ತು 7ರಂದು ಬೆಳಿಗ್ಗೆ 9 ಗಂಟೆಗೆ ಪಟ್ಟಣದ ಬಿ.ಕೆ. ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು, ಅರ್ಜಿ ಆಹ್ವಾನಿಸಲಾಗಿದೆ.
ಕ್ರೀಡಾಪಟುಗಳು ಶಾಲೆ ಅಥವಾ ಕಾಲೇಜಿನ ಗುರುತಿನ ಚೀಟಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಮತದಾರರ ಗುರುತಿನಚೀಟಿ ಹಾಗೂ ಸರ್ಕಾರದಿಂದ ಅಧಿಕೃತ ಇರುವ ಇತರೆ ಗುರುತಿನ ಚೀಟಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂಖ್ಯೆ 8746016011, 9740808861 ಅಥವಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕರ ಕಚೇರಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.