ADVERTISEMENT

‘ರಾಜಕೀಯ ಸೇಡಿಗಾಗಿ ವರ್ಗಾವಣೆ’

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2018, 16:18 IST
Last Updated 19 ಸೆಪ್ಟೆಂಬರ್ 2018, 16:18 IST

ಬೆಳಗಾವಿ: ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ ಅವರನ್ನು ಬುಧವಾರ ವರ್ಗಾವಣೆ ಮಾಡಲಾಗಿದ್ದು, ಅವರಿಗೆ ಯಾವುದೇ ಹುದ್ದೆ ತೋರಿಸಿಲ್ಲ. ಅವರ ಜಾಗಕ್ಕೆ ಕೃಷ್ಣಾ ಮೇಲ್ದಂಡೆ ಯೋಜನೆಯ ಮುಖ್ಯ ವ್ಯವಸ್ಥಾಪಕ ಎಸ್.ಬಿ. ಬೊಮ್ಮನಹಳ್ಳಿ ಅವರನ್ನು ನೇಮಕ ಮಾಡಲಾಗಿದೆ.

ಜಿಯಾವುಲ್ಲಾ ವರ್ಗಾವಣೆ ಬಗ್ಗೆ ಕೆಲವು ದಿನಗಳಿಂದಲೂ ವದಂತಿಗಳು ಹರಿದಾಡಿದ್ದವು.

ಈ ಅಧಿಕಾರಿ ವರ್ಗಾವಣೆ ಮಾಡಬಾರದು ಎಂದು ಆಗ್ರಹಿಸಿ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿ ಪ್ರಾದೇಶಿಕ ಆಯುಕ್ತ ಪಿ.ಎ. ಮೇಘಣ್ಣವರ ಅವರಿಗೆ ಮನವಿ ಸಲ್ಲಿಸಿದ್ದರು.

ADVERTISEMENT

‘ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ ಮಾಲೀಕತ್ವದ ಸೌಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸಿದ್ದ ರೈತರಿಗೆ ಬರಬೇಕಾದ ಬಾಕಿ ಕೊಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದ ಡಿಸಿಯನ್ನು ರಾಜಕೀಯ ಸೇಡಿಗಾಗಿ ವರ್ಗಾವಣೆ ಮಾಡಲಾಗುತ್ತಿದೆ’ ಎಂದು ಆರೋಪಿಸಿದ್ದರು.

‘ಹಲವು ಕಾರ್ಖಾನೆಗಳಿಂದ ಬಹಳಷ್ಟು ಬಾಕಿ ಕೊಡಿಸಲು ಅವರು ಕ್ರಮ ವಹಿಸಿದ್ದರು. ಆಡಳಿತ ಮಂಡಗಳಿಗಳ ಪ್ರತಿನಿಧಿಗಳ ಸಭೆ ನಡೆಸಿ, ಬಾಕಿ ಕೊಡದಿದ್ದಲ್ಲಿ ಸಕ್ಕರೆ ಜಪ್ತಿಗೆ ಶಿಫಾರಸು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದರು. ಅವರ ವರ್ಗಾವಣೆ ಹಿಂದೆ ಸಕ್ಕರೆ ಕಾರ್ಖಾನೆಗಳ ಲಾಬಿ ಕೆಲಸ ಮಾಡಿದೆ’ ಎಂದು ದೂರಿದ್ದರು. ‘ರೈತರ ಪರ ಕೆಲಸ ಮಾಡುತ್ತಿರುವ ಅಧಿಕಾರಿಗಳಿಗೆ ತೊಂದರೆ ಕೊಡಬಾರದು’ ಎಂದು ಒತ್ತಾಯಿಸಿದ್ದರು.

ರಾತ್ರಿ ವೇಳೆಗೆ ವರ್ಗಾವಣೆ ಆದೇಶ ಹೊರಬಿದ್ದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.