ADVERTISEMENT

ಗಡಿಯ ಚೆಕ್ ಪೋಸ್ಟ್‌ಗಳಲ್ಲಿ ಹೆಚ್ಚಿನ ನಿಗಾಕ್ಕೆ ಸೂಚನೆ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2021, 16:02 IST
Last Updated 9 ಏಪ್ರಿಲ್ 2021, 16:02 IST
ಬೆಳಗಾವಿ ತಾಲ್ಲೂಕಿನ ಧಾಮಣೆ ಎಸ್. ಬೈಲೂರ ಗ್ರಾಮದ ಮತಗಟ್ಟೆಗೆ ಜಿಲ್ಲಾಧಿಕಾರಿ ಡಾ.ಕೆ. ಹರೀಶ್‌ಕುಮಾರ್ ಹಾಗೂ ನಗರ ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್‌ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು
ಬೆಳಗಾವಿ ತಾಲ್ಲೂಕಿನ ಧಾಮಣೆ ಎಸ್. ಬೈಲೂರ ಗ್ರಾಮದ ಮತಗಟ್ಟೆಗೆ ಜಿಲ್ಲಾಧಿಕಾರಿ ಡಾ.ಕೆ. ಹರೀಶ್‌ಕುಮಾರ್ ಹಾಗೂ ನಗರ ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್‌ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು   

ಬೆಳಗಾವಿ: ನೆರೆಯ ಮಹಾರಾಷ್ಟ್ರ ರಾಜ್ಯದ ಗಡಿಗೆ ಹೊಂದಿಕೊಂಡಿರುವ ಧಾಮಣೆ ಎಸ್. ಬೈಲೂರ ಗ್ರಾಮದ ಮತಗಟ್ಟೆಗೆ ಜಿಲ್ಲಾಧಿಕಾರಿ ಡಾ.ಕೆ. ಹರೀಶ್ ಕುಮಾರ್ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.

‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಚುನಾವಣಾ ಆಯೋಗದ ಮಾರ್ಗಸೂಚಿ ಅನ್ವಯ ಎಲ್ಲ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಿಕೊಳ್ಳಬೇಕು. ಮತಗಟ್ಟೆಯು ಗಡಿ ಭಾಗದಲ್ಲಿ ಇರುವುದರಿಂದ ತುರ್ತು ದೂರವಾಣಿ ಸಂಪರ್ಕ ವ್ಯವಸ್ಥೆ ಖಾತ್ರಿಪಡಿಸಿಕೊಳ್ಳಬೇಕು. ಕುಡಿಯುವ ನೀರು, ವಿದ್ಯುತ್, ಶೌಚಾಲಯ ಹೀಗೆ ಎಲ್ಲ ಮೂಲಸೌಕರ್ಯಗಳನ್ನು ಒದಗಿಸುವ ಜೊತೆಗೆ ಸಮರ್ಪಕ ಸಾರಿಗೆ ಮತ್ತಿತರ ಸೌಲಭ್ಯಗಳನ್ನು ಕಲ್ಪಿಸಬೇಕು’ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಹಿಂಡಲಗಾ ಮತಗಟ್ಟೆಯನ್ನೂ ಜಿಲ್ಲಾಧಿಕಾರಿ ವೀಕ್ಷಿಸಿದರು.

ADVERTISEMENT

ಗಡಿ ಭಾಗದ ರಾಕಸಕೊಪ್ಪ ಬಳಿ ಸ್ಥಾಪಿಸಿರುವ ಚೆಕ್ ಪೋಸ್ಟ್ ಮತ್ತು ಅಬಕಾರಿ ತನಿಖಾ ಠಾಣೆಗೂ ಭೇಟಿ ನೀಡಿದ ಅಲ್ಲಿನ ದಾಖಲೆಗಳನ್ನು ಪರಿಶೀಲಿಸಿದರು. ‘ಉಪ ಚುನಾವಣೆ ಮತದಾನ ದಿನ ಸಮೀಪಿಸುತ್ತಿರುವುದರಿಂದ ಹೆಚ್ಚಿನ ನಿಗಾ ವಹಿಸಬೇಕು’ ಎಂದು ಸೂಚಿಸಿದರು.

ನಗರ ಪೊಲೀಸ್ ಆಯುಕ್ತ ಡಾ.ಕೆ. ತ್ಯಾಗರಾಜನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.