ADVERTISEMENT

ಮೋಳವಾಡದಲ್ಲಿ ಜಿಲ್ಲಾಧಿಕಾರಿ ವಾಸ್ತವ್ಯ 19ರಂದು

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2022, 16:15 IST
Last Updated 16 ಮಾರ್ಚ್ 2022, 16:15 IST
ಎಂ.ಜಿ. ಹಿರೇಮಠ
ಎಂ.ಜಿ. ಹಿರೇಮಠ   

ಬೆಳಗಾವಿ: ‘ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಮಾರ್ಚ್‌ 19ರಂದು ಕಾಗವಾಡ ತಾಲ್ಲೂಕಿನ ಮೋಳವಾಡಲ್ಲಿ ವಾಸ್ತವ್ಯ ಮಾಡಲಿದ್ದಾರೆ.

ಆಡಳಿತವನ್ನು ಜನರ ಮನೆಬಾಗಿಲಿಗೆ ಕೊಂಡೊಯ್ಯುವ ದಿಸೆಯಲ್ಲಿ ಪ್ರತಿ ತಿಂಗಳು ಮೂರನೇ ಶನಿವಾರ ಜಿಲ್ಲಾಧಿಕಾರಿ ಗ್ರಾಮವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಜಿಲ್ಲೆಯ ಎಲ್ಲ ಉಪ ವಿಭಾಗಾಧಿಕಾರಿಗಳು ಮತ್ತು ತಾಲ್ಲೂಕುಗಳ ತಹಶೀಲ್ದಾರರು ಕೂಡ ಅಂದು ತಮ್ಮ ವ್ಯಾಪ್ತಿಯ ಒಂದು ಗ್ರಾಮದಲ್ಲಿ ‌ವಾಸ್ತವ್ಯ ಮಾಡಲಿದ್ದಾರೆ.

ಅಂದು ಬೆಳಿಗ್ಗೆ ಗ್ರಾಮಕ್ಕೆ ತೆರಳಲಿರುವ ಜಿಲ್ಲಾಧಿಕಾರಿ, ಅಲ್ಲಿನ ಶಾಲೆ, ಗ್ರಾಮ ಪಂಚಾಯ್ತಿ, ಅಂಗನವಾಡಿ ಕೇಂದ್ರ ಮೊದಲಾದವುಗಳಿಗೆ ಭೇಟಿ ನೀಡಲಿದ್ದಾರೆ. ಮನೆ ಮನೆಗೆ ತೆರಳಿ ಗ್ರಾಮದ ಜನರ ಅಹವಾಲುಗಳನ್ನು ಆಲಿಸಲಿದ್ದಾರೆ. ಸಾಮಾಜಿಕ ಭದ್ರತಾ‌‌ ಪಿಂಚಣಿ ಹಾಗೂ ಇತರ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯಗಳು ಮತ್ತು ಮಂಜೂರಾತಿ ಆದೇಶಗಳನ್ನು ವಿತರಿಸಲಿದ್ದಾರೆ.

ADVERTISEMENT

ಜಿಲ್ಲಾಧಿಕಾರಿ ಇದಕ್ಕೂ ಮನ್ನ ಬೈಲಹೊಂಗಲ ತಾಲ್ಲೂಕಿನ ಬೈಲೂರು, ಕಿತ್ತೂರು ತಾಲ್ಲೂಕಿನ ವೀರಾಪುರ ಹಾಗೂ ನಿಪ್ಪಾಣಿ ತಾಲ್ಲೂಕಿನ ಹಂಚಿನಾಳ ಕೆ.ಎಸ್. ಗ್ರಾಮಗಳಲ್ಲಿ ವಾಸ್ತವ್ಯ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.