ಬೆಳಗಾವಿ: ಇಲ್ಲಿನ ಬಿ.ಕೆ. ಮಾಡೆಲ್ ಪ್ರೌಢಶಾಲೆಯಲ್ಲಿ ಭಾನುವಾರ ಬೆಳಿಗ್ಗೆ 9ಕ್ಕೆ ಡಿಸಿಸಿ ಬ್ಯಾಂಕ್ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ.
ಡಿಸಿಸಿ ಬ್ಯಾಂಕಿನ 16 ನಿರ್ದೇಶಕರ ಸ್ಥಾನಗಳ ಪೈಕಿ 9 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ. ಇಂದು ಏಳು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಇಂದು ಸಂಜೆಯೇ ಫಲಿತಾಂಶ ಹೊರಬೀಳಲಿದ್ದು, ಅಭ್ಯರ್ಥಿಗಳ ಬೆಂಬಲಿಗರು ಅಪಾರ ಸಂಖ್ಯೆಯಲ್ಲಿ ಕಾಲೇಜಿನ ಹೊರಗೆ ಸೇರಿದ್ದಾರೆ.
ಅಥಣಿ ಕ್ಷೇತ್ರದಲ್ಲಿ ಶಾಸಕ ಲಕ್ಷ್ಮಣ ಸವದಿ ವಿರುದ್ಧ ಮಾಜಿ ಶಾಸಕ ಮಹೇಶ ಕುಮಠಳ್ಳಿ, ನಿಪ್ಪಾಣಿಯಲ್ಲಿ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ವಿರುದ್ಧ ಉತ್ತಮ ಪಾಟೀಲ ಸ್ಪರ್ಧಿಸಿದ್ದಾರೆ.
ಹುಕ್ಕೇರಿಯಲ್ಲಿ ಮಾಜಿ ಸಂಸದ ರಮೇಶ ಕತ್ತಿ ವಿರುದ್ಧ ರಾಜೇಂದ್ರ ಪಾಟೀಲ, ಚನ್ನಮ್ಮನ ಕಿತ್ತೂರಿನಲ್ಲಿ ನಾನಾಸಾಹೇಬ ಪಾಟೀಲ ವಿರುದ್ಧ ವಿಕ್ರಮ ಇನಾಮದಾರ, ರಾಯಬಾಗದದಲ್ಲಿ ಡಿಸಿಸಿ ಬ್ಯಾಂಕ್ ಹಾಲಿ ಅಧ್ಯಕ್ಷ ಅಪ್ಪಾಸಾಹೇಬ ಕುಲಗೂಡೆ ವಿರುದ್ಧ ಬಸಗೌಡ ಆಸಂಗಿ, ರಾಮದುರ್ಗದಲ್ಲಿ ಶ್ರೀಕಾಂತ ಢವಣ ವಿರುದ್ಧ ಮಲ್ಲಣ್ಣ ಯಾದವಾಡ ಹಾಗೂ ಬೈಲಹೊಂಗಲದಲ್ಲಿ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ವಿರುದ್ಧ ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ್ ಸ್ಪರ್ಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.