ADVERTISEMENT

ನೀರು ಪೂರೈಕೆ ಯೋಜನೆ ಪ್ರಗತಿ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2020, 14:27 IST
Last Updated 8 ಸೆಪ್ಟೆಂಬರ್ 2020, 14:27 IST
ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯದ ಬಳಿ ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ನಿರ್ದೇಶಕಿ ದೀಪಾ ಕುಡಚಿ ಮಂಗಳವಾರ ಅಧಿಕಾರಿಗಳಿಂದ ಮಾಹಿತಿ ಪಡೆದರು
ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯದ ಬಳಿ ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ನಿರ್ದೇಶಕಿ ದೀಪಾ ಕುಡಚಿ ಮಂಗಳವಾರ ಅಧಿಕಾರಿಗಳಿಂದ ಮಾಹಿತಿ ಪಡೆದರು   

ಬೆಳಗಾವಿ: ತಾಲ್ಲೂಕಿನ ತುಮ್ಮರಗುದ್ದಿ, ಕುಂದರಗಿ, ಬಸವಸನಕೊಳ್ಳ ಹಾಗೂ ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯಕ್ಕೆ ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ನಿರ್ದೇಶಕಿ ದೀಪಾ ಕುಡಚಿ ಮಂಗಳವಾರ ಭೇಟಿ ನೀಡಿದರು.

ಮಂಡಳಿಯಿಂದ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳು ಹಾಗೂ ಕುಡಿಯುವ ನೀರು ಪೂರೈಕೆ ಯೋಜನೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

‘ಸೆ. 15ರಂದು ಬೆಂಗಳೂರಿನಲ್ಲಿ ಮಂಡಳಿ ಸಭೆ ನಡೆಯಲಿದೆ. ಮಂಡಳಿತ ಅಧ್ಯಕ್ಷರೊಂದಿಗೆ ಚರ್ಚಿಸಿ, ಅಭಿವೃದ್ಧಿ ಕೆಲಸಕ್ಕೆ ವೇಗ ನೀಡಲಾಗುವುದು. ಎಲ್ಲ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಅಗತ್ಯ ಕ್ರಮ ವಹಿಸಲಾಗುವುದು’ ಎಂದು ತಿಳಿಸಿದರು.

ADVERTISEMENT

ಮಂಡಳಿಯ ಎಇ ವಿ.ಎಲ್. ಚಂದ್ರಪ್ಪ, ಎಇಇ ಎಸ್.ಬಿ. ಹಾಲನ್ನವರ, ಸತೀಶ ಶಹಾಪುರಕರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.