ADVERTISEMENT

ಮನೆಯಲ್ಲಿ ವನ್ಯಜೀವಿ ಮಾಂಸ, ಜಿಂಕೆ ಕೊಂಬು ಪತ್ತೆ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2024, 15:54 IST
Last Updated 12 ಸೆಪ್ಟೆಂಬರ್ 2024, 15:54 IST
ಖಾನಾಪುರ ತಾಲ್ಲೂಕಿನ ಜಾಂಬೇಗಾಳಿಯಲ್ಲಿ ನಡೆದ ದಾಳಿ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ವನ್ಯಜೀವಿ ಮಾಂಸ ಮತ್ತು ಜಿಂಕೆ ಕೊಂಬುಗಳನ್ನು ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿದ್ದಾರೆ
ಖಾನಾಪುರ ತಾಲ್ಲೂಕಿನ ಜಾಂಬೇಗಾಳಿಯಲ್ಲಿ ನಡೆದ ದಾಳಿ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ವನ್ಯಜೀವಿ ಮಾಂಸ ಮತ್ತು ಜಿಂಕೆ ಕೊಂಬುಗಳನ್ನು ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿದ್ದಾರೆ   

ಖಾನಾಪುರ: ತಾಲ್ಲೂಕಿನ ಗೋಟಗಾಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಜಾಂಬೇಗಾಳಿ ಗ್ರಾಮದ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ವನ್ಯಜೀವಿ ಮಾಂಸ ಮತ್ತು ಜಿಂಕೆ ಕೊಂಬುಗಳನ್ನು ಅರಣ್ಯ ಅಧಿಕಾರಿಗಳು ಗುರುವಾರ ಪತ್ತೆಹಚ್ಚಿ, ಇಬ್ಬರನ್ನು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ಜಾಂಬೇಗಾಳಿ ಗ್ರಾಮದ ಮಹ್ಮದಲಿ ಹಲಸಿಕರ, ಮೌಲಾಲಿ ಹಲಸಿಕರ ಎಂಬುವವರನ್ನು ಬಂಧಿಸಿದ್ದಾರೆ.

ಬಂಧಿತರಿಂದ ಕಾಡುಕೋಣದ ಮಾಂಸ ಮತ್ತು ಜಿಂಕೆಯ ಕೊಂಬುಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರನ್ನು ಮತ್ತು ದಾಳಿ ಸಂದರ್ಭದಲ್ಲಿ ದೊರೆತ ವಸ್ತುಗಳನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದ್ದು, ನಾಗರಗಾಳಿ ವಲಯ ಅರಣ್ಯಾಧಿಕಾರಿಗಳ ಕಚೇರಿಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿ ಪ್ರಕರಣ ದಾಖಲಾಗಿದೆ.

ADVERTISEMENT

ನಾಗರಗಾಳಿ ಉಪ ವಿಭಾಗದ ಎಸಿಎಫ್ ಶಿವಾನಂದ ಮಗದುಮ್ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ನಾಗರಗಾಳಿ ಆರ್.ಎಫ್.ಒ ಪ್ರಶಾಂತ ಮಂಗಸೂಳಿ, ಕೇದಾರ ತೇಲಂಗಿ, ಸಂತೋಷ ಗೌಡರ, ಲಚ್ಯಾಣ, ಪ್ರವೀಣ ಕಮ್ಮಾರ ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.