ADVERTISEMENT

ಬೆಳಗಾವಿ| ವಿಜಯ ಸಂಕಲ್ಪ ಯಾತ್ರೆಗೆ ರಾಜನಾಥ್ ಸಿಂಗ್ ಇಂದು ಚಾಲನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಮಾರ್ಚ್ 2023, 6:14 IST
Last Updated 2 ಮಾರ್ಚ್ 2023, 6:14 IST
ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್
ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್   

ಬೆಳಗಾವಿ: ರಾಜ್ಯದಲ್ಲಿ ಪಕ್ಷದ ಪರ ಅಲೆ ಎಬ್ಬಿಸಲು ಬಿಜೆಪಿಯು ಮಾರ್ಚ್‌ 1 ರಿಂದ ‘ವಿಜಯ ಸಂಕಲ್ಪ ಯಾತ್ರೆ’ ಆರಂಭಿಸಿದೆ. ಬಿಜೆಪಿ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಯಾತ್ರೆಯ ಎರಡನೇ ದಿನವಾದ ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೆಳಗಾವಿಯಲ್ಲಿ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಲಿದ್ದಾರೆ.

ಇಂದು ಮಧ್ಯಾಹ್ನ 12.15 ಕ್ಕೆ ನಂದಗಡದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಮಾಧಿ ಸ್ಥಳಕ್ಕೆ ಮೊದಲು ಭೇಟಿ ನೀಡಿ, ನಂತರ ಮಧ್ಯಾಹ್ನ 12.30 ಸುಮಾರಿಗೆ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಇದಾದ ನಂತರ ಮಧ್ಯಾಹ್ನ 3 ಗಂಟೆಗೆ ಚನ್ನಮ್ಮ ಸರ್ಕಲ್ ನಿಂದ ಕಿತ್ತೂರು ಕೋಟೆಯವರೆಗೆ ರೋಡ್ ಶೋ ನಡೆಯಲಿದೆ.

ರಾಷ್ಟ್ರೀಯ ಅಧ್ಯಕ್ಷ ಜೆ.ಪಿ‌.ನಡ್ಡಾ ಅವರು ಮಹದೇಶ್ವರ ಬೆಟ್ಟದ‌‌ ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಬುಧವಾರ ಯಾತ್ರೆಗೆ ಚಾಲನೆ ನೀಡಿದ್ದರು. ನಾಳೆ ಬೀದರ್‌ ಜಿಲ್ಲೆ ಬಸವಕಲ್ಯಾಣ ಅನುಭವಮಂಪಟದ ಸ್ಥಳದಿಂದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಯಾತ್ರೆಗೆ ಚಾಲನೆ ನೀಡಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.