ಬೆಳಗಾವಿ: ದೆಹಲಿಯ ಮರ್ಕಜ್ ಧಾರ್ಮಿಕ ಸಭೆಗೆ ಹೋಗಿ ಬಂದಿರುವ ಬೆಳಗಾವಿ ಜಿಲ್ಲೆಯ 62 ಜನರ ಮಾಹಿತಿ ಲಭಿಸಿದೆ. ಯಾರಿಗೂ ಸೋಂಕಿನ ಲಕ್ಷಣಗಳಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ತಿಳಿಸಿದ್ದಾರೆ.
ಇವರ ಪೈಕಿ ಮಧುಮೇಹ, ಅಸ್ತಮಾ ಮತ್ತಿತರ ತೊಂದರೆ ಹೊಂದಿರುವ 50 ವರ್ಷ ವಯಸ್ಸು ಮೇಲ್ಪಟ್ಟ 27 ಜನರನ್ನು ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಆಸ್ಪತ್ರೆಗೆ ಕರೆತಂದು ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಲಾಗುತ್ತಿದೆ.
ಇದುವರೆಗೆ ನಡೆಸಲಾದ ವೈದ್ಯಕೀಯ ತಪಾಸಣೆಯ ಪ್ರಕಾರ ಯಾರಿಗೂ ಸೋಂಕಿನ ಲಕ್ಷಣಗಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.