ADVERTISEMENT

ಸರ್ಕಾರಿ ನೌಕರರೆಂದು ಪರಿಗಣಿಸಲು ಮನವಿ

​ಪ್ರಜಾವಾಣಿ ವಾರ್ತೆ
Published 16 ಜೂನ್ 2019, 13:18 IST
Last Updated 16 ಜೂನ್ 2019, 13:18 IST
ಬೆಳಗಾವಿಯಲ್ಲಿ ರಾಜ್ಯ ಸಾರಿಗೆ ಸಂಸ್ಥೆಯವರು ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಒತ್ತಾಯಿಸಿ ಅರಣ್ಯ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಭಾನುವಾರ ಮನವಿ ಸಲ್ಲಿಸಿದರು
ಬೆಳಗಾವಿಯಲ್ಲಿ ರಾಜ್ಯ ಸಾರಿಗೆ ಸಂಸ್ಥೆಯವರು ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಒತ್ತಾಯಿಸಿ ಅರಣ್ಯ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಭಾನುವಾರ ಮನವಿ ಸಲ್ಲಿಸಿದರು   

ಬೆಳಗಾವಿ: ತಮ್ಮನ್ನು ಸಾರಿಗೆ ನೌಕರರೆಂದು ಪರಿಗಣಿಸಿ, ಅವರಿಗೆ ದೊರೆಯುವ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಿ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಎನ್‌ಡಬ್ಲ್ಯುಕೆಎಸ್‌ಆರ್‌ಟಿಸಿ) ನೌಕರರು ಅರಣ್ಯ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಭಾನುವಾರ ಮನವಿ ಸಲ್ಲಿಸಿದರು.

ಆಂಧ್ರಪ್ರದೇಶ ಸರ್ಕಾರದ ಮಾದರಿಯನ್ನು ಇಲ್ಲೂ ಅನುಸರಿಸಬೇಕು. ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ನೀಡಿರುವ ಭರವಸೆ ಈಡೇರಿಸಬೇಕು ಎಂದು ಕೋರಿದರು.

‘ಸಾರಿಗೆ ಸಂಸ್ಥೆಯು ರಾಜ್ಯದ ಜೀವನಾಡಿಯಾಗಿದೆ. ಜನಸಾಮಾನ್ಯರಿಗೆ ಸೇವೆ ಒದಗಿಸುತ್ತಿರುವ ಪ್ರಮುಖ ಇಲಾಖೆ ನಮ್ಮದಾಗಿದೆ. ಇಲ್ಲಿನ ಸಿಬ್ಬಂದಿ ಹಗಲಿರುಳೂ ದುಡಿಯುತ್ತಿದ್ದಾರೆ. ಆದರೆ, ಸಾರಿಗೆ ನೌಕರರಿಗಿಂತ ಕಡಿಮೆ ಸೌಲಭ್ಯ ಹಾಗೂ ಸಂಬಳ ದೊರೆಯುತ್ತದೆ. ಇದರಿಂದ ನಮಗೆ ಅನ್ಯಾಯವಾಗುತ್ತಿದೆ’ ಎಂದು ತಿಳಿಸಿದರು.

ADVERTISEMENT

ಇನ್ನೊಂದೆಡೆ, ನಿಗಮದ ಇಲ್ಲಿನ ಎಲ್ಲ ಘಟಕದವರು ಪತ್ರ ಚಳವಳವಳಿ ನಡೆಸಿದರು. ಪತ್ರಗಳ ಮುಖಾಂತರ ತಮ್ಮ ಅಳಲನ್ನು ಮುಖ್ಯಮಂತ್ರಿಗೆ ಕಳುಹಿಸುವ ಚಳವಳಿ ಇದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.