ADVERTISEMENT

ಎಂಇಎಸ್ ನಿಷೇಧಕ್ಕೆ ಆಗ್ರಹ: ಬೆಳಗಾವಿಯಲ್ಲಿ ಕನ್ನಡಪರ ಸಂಘಟನೆಗಳ ಮುಖಂಡರು ವಶಕ್ಕೆ

ಕನ್ನಡ ಸಂಘಟನೆಗಳಿಂದ ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2021, 7:12 IST
Last Updated 20 ಡಿಸೆಂಬರ್ 2021, 7:12 IST
 ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಬರುತ್ತಿದ್ದ ಕರವೇ (ಪ್ರವೀಶ್ ಶೆಟ್ಟಿ ಬಣ) ಕಾರ್ಯಕರ್ತರನ್ನು ಪೊಲೀಸರು ತಾಲ್ಲೂಕಿನ ಹಿರೇಬಾಗೇವಾಡಿ ಟೋಲ್ ಬಳಿ ಸೋಮವಾರ ವಶಕ್ಕೆ ಪಡೆದಿದ್ದಾರೆ
ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಬರುತ್ತಿದ್ದ ಕರವೇ (ಪ್ರವೀಶ್ ಶೆಟ್ಟಿ ಬಣ) ಕಾರ್ಯಕರ್ತರನ್ನು ಪೊಲೀಸರು ತಾಲ್ಲೂಕಿನ ಹಿರೇಬಾಗೇವಾಡಿ ಟೋಲ್ ಬಳಿ ಸೋಮವಾರ ವಶಕ್ಕೆ ಪಡೆದಿದ್ದಾರೆ   

ಬೆಳಗಾವಿ: ಮಹಾರಾಷ್ಟ್ರ ಏಕೀಕರಣಸಮಿತಿ(ಎಂಇಎಸ್) ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಆಗ್ರಹಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಬೆಳಗಾವಿಯಲ್ಲಿ ಪ್ರತಿಭಟನೆ ತೀವ್ರಗೊಳಿಸಿವೆ.

ಏತನ್ಮಧ್ಯೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಬರುತ್ತಿದ್ದ ಕರವೇ (ಪ್ರವೀಶ್ ಶೆಟ್ಟಿ ಬಣ) ಕಾರ್ಯಕರ್ತರನ್ನು ಪೊಲೀಸರು ತಾಲ್ಲೂಕಿನ ಹಿರೇಬಾಗೇವಾಡಿ ಟೋಲ್ ಬಳಿ ಸೋಮವಾರ ವಶಕ್ಕೆ ಪಡೆದಿದ್ದಾರೆ.

ಅಧ್ಯಕ್ಷ ಪ್ರವೀಣ್ ಶೆಟ್ಟಿ ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ತೆರಳುತ್ತಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ನಾರಾಯಣ ಗೌಡ ಅವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ADVERTISEMENT

ಹಿರೇಬಾಗೇವಾಡಿ ಬಳಿ ಹಾಗೂ ಬೆಳಗಾವಿ, ಸುವರ್ಣಸೌಧದ ಸುತ್ತಮುತ್ತ ಭಾರೀ ಪೊಲೀಸ್ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದ್ದು, ಪ್ರತಿಭಟನಾಕಾರರ ಮೇಲೆ ಪೊಲೀಸರು ನಿಗಾ ಇಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.