ADVERTISEMENT

ದೇವಾಂಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆಗ್ರಹಿಸಿ ಮನವಿ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2021, 13:37 IST
Last Updated 19 ಫೆಬ್ರುವರಿ 2021, 13:37 IST
ದೇವಾಂಗ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಆಗ್ರಹಿಸಿ ಜವಳಿ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ನೀಲಕಂಠ ಮಾಸ್ತಮರಡಿ ನೇತೃತ್ವದಲ್ಲಿ ಮುಖಂಡರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು
ದೇವಾಂಗ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಆಗ್ರಹಿಸಿ ಜವಳಿ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ನೀಲಕಂಠ ಮಾಸ್ತಮರಡಿ ನೇತೃತ್ವದಲ್ಲಿ ಮುಖಂಡರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು   

ಬೆಳಗಾವಿ: ‘ರಾಜ್ಯದಲ್ಲಿ 30 ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆ ಹೊಂದಿರುವ ದೇವಾಂಗ ಸಮುದಾಯಕ್ಕೆ ಪ್ರತ್ಯೇಕ ದೇವಾಂಗ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು’ ಎಂದು ಆಗ್ರಹಿಸಿ ಜವಳಿ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ನೀಲಕಂಠ ಮಾಸ್ತಮರಡಿ ಅವರ ನೇತೃತ್ವದಲ್ಲಿ ಮುಖಂಡರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.

ಸಮಾಜದಿಂದ ಸತ್ಕರಿಸುವ ಮೂಲಕ ಬೇಡಿಕೆ ಕುರಿತು ತಿಳಿಸಿದರು.

‘ಮುಂಬರುವ ಬಜೆಟ್‌ನಲ್ಲಿ ನೇಕಾರರ ಆರ್ಥಿಕ ಸ್ವಾವಲಂಬನೆಗಾಗಿ ಯೋಜನೆ ಘೋಷಿಸಬೇಕು. ಕೋವಿಡ್–19 ಸ‌ಂಕಷ್ಟದಿಂದ ತತ್ತರಿಸಿರುವ ನಮ್ಮ ಜೀವನ ಸುಧಾರಣೆಗಾಗಿ ಕೈಮಗ್ಗ ಜವಳಿ ಉದ್ಯಮಕ್ಕೆ ಹೆಚ್ಚಿನ ಅನುದಾನ ಒದಗಿಸಬೇಕು. ಹೆಚ್ಚಿನ ಯೋಜನೆಗಳಿಗೆ ಒತ್ತು ನೀಡಬೇಕು’ ಎಂದು ಒತ್ತಾಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.