ಬೈಲಹೊಂಗಲ: ತಾಲ್ಲೂಕಿನ ಕುರಗುಂದ ಗ್ರಾಮದ ಜಮೀನುಗಳಲ್ಲಿರುವ ರೈತರ ಮನೆಗಳಿಗೆ ವಿದ್ಯುತ್ ಸಮರ್ಪಕವಾಗಿ ಪೂರೈಕೆ ಆಗದೆ ಇರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗುತ್ತಿದೆ. ಎಂದು ಗ್ರಾಮದ ಮುಖಂಡ ಸುನೀಲ ದೇಸಾಯಿ ಹೇಳಿದರು.
ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿದ್ಯುತ್ ಸಮರ್ಪಕವಾಗಿ ಪೂರೈಕೆ ಮಾಡಲು ಕ್ರಮ ಕೈಗೊಳ್ಳದಿದ್ದರೆ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ, ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.
ಸುನೀಲ ದೇಸಾಯಿ, ಸೋಮಲಿಂಗ ಮರೆನ್ನವರ, ಈರಣ್ಣಗೌಡ ಪಾಟೀಲ, ನೀಲಪ್ಪ ತಳವಾರ, ಸೋಮಲಿಂಗ ನಾಗಲಾಪೂರ, ಫಕ್ಕೀರ ಚಿಕ್ಕವೀರನ್ನವರ, ಬಸಪ್ಪ ಬಾಗೇವಾಡಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.