ADVERTISEMENT

ಬೆಳಗಾವಿ: ತಾಂತ್ರಿಕ ಸಿಬ್ಬಂದಿ ಮಾದರಿಯಲ್ಲಿ ವೇತನ ಶ್ರೇಣಿ ನಿಗದಿಪಡಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2024, 9:20 IST
Last Updated 26 ಸೆಪ್ಟೆಂಬರ್ 2024, 9:20 IST
<div class="paragraphs"><p>ಬೆಳಗಾವಿ ತಹಶೀಲ್ದಾರ್‌ ಕಚೇರಿ ಆವರಣದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿದರು‌.</p></div>

ಬೆಳಗಾವಿ ತಹಶೀಲ್ದಾರ್‌ ಕಚೇರಿ ಆವರಣದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿದರು‌.

   

ಪ್ರಜಾವಾಣಿ ಚಿತ್ರ

ಬೆಳಗಾವಿ: ವಿವಿಧ ಇಲಾಖೆಗಳ ತಾಂತ್ರಿಕ ಸಿಬ್ಬಂದಿ ಮಾದರಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳಿಗೂ ವೇತನ ಶ್ರೇಣಿ ನಿಗದಿಪಡಿಸಿ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿ, ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಪದಾಧಿಕಾರಿಗಳು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಇಲ್ಲಿನ ತಹಶೀಲ್ದಾರ್‌ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ADVERTISEMENT

ಯಾವ ಘೋಷಣೆ ಕೂಗದ ಪ್ರತಿಭಟನಕಾರರು, ಮೌನವಾಗಿ ಕುಳಿತುಕೊಂಡೇ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಪಿ.ಶಿಂಧೆ, ‘ನಾವು ತಾಂತ್ರಿಕವಾಗಿ ಅನುಭವಿ ಸಿಬ್ಬಂದಿಯಲ್ಲ. ಆದರೂ, ಸರ್ಕಾರ ವಹಿಸಿದ ತಾಂತ್ರಿಕ ಕೆಲಸ ನಿರ್ವಹಿಸುತ್ತಿದ್ದೇವೆ. ಮೂಲಸೌಕರ್ಯ ವಿಚಾರವಾಗಿ ಕಡೆಗಣನೆಗೆ ಒಳಗಾಗಿದ್ದೇವೆ. ಹಾಗಾಗಿ ಕೆಲಸಕ್ಕೆ ಸಾಮೂಹಿಕವಾಗಿ ರಜೆ ಹಾಕಿ ಧರಣಿ ಮಾಡುತ್ತಿದ್ದೇವೆ’ ಎಂದರು.

‘ಜಿಲ್ಲೆಯಲ್ಲಿ ಕೆಲಸ ಮಾಡುತ್ತಿರುವ ನಮಗೆ ಸುಸಜ್ಜಿತವಾದ ಕಚೇರಿ ಕಲ್ಪಿಸಬೇಕು. ಅಲ್ಲಿ ಗುಣಮಟ್ಟದ ಪೀಠೋಪಕರಣಗಳು, ಅಂತರ್ಜಾಲ ವ್ಯವಸ್ಥೆ ಒದಗಿಸಬೇಕು. ಸಂಯೋಜನೆ, ಇ–ಆಫೀಸ್‌, ಗರುಡ, ಭೂಮಿ, ನವೋದಯ, ದಿಶಾಂಕ ಮತ್ತಿತರ ತಂತ್ರಾಂಶಗಳ ನಿರ್ವಹಣೆಗೆ ಹೆಚ್ಚಿನ ಡೇಟಾ ಸಾಮರ್ಥ್ಯದ ಸ್ಮಾರ್ಟ್‌ಫೋನ್‌ಗಳನ್ನು ನೀಡಬೇಕು’ ಎಂದು ಗ್ರಾಮ ಆಡಳಿತ ಅಧಿಕಾರಿಗಳು ಒತ್ತಾಯಿಸಿದರು.

ಕಿರಣ ತೊರಗಲ್ಲ, ಅನಿಲ ಕಮ್ಮಾರ, ಏಕನಾಥ ಅಳಗುಂಡಿ, ಉಮೇದ‌ ಕಾಪಸೆ, ಎನ್.ಪಿ.ಸವದತ್ತಿ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.