
ಬೆಳಗಾವಿ: ‘ರಾಜ್ಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಹಿಂದುಳಿದ ಕೊರಮ, ಕೊರಚ ಸಮುದಾಯದ ಅಭಿವೃದ್ಧಿಗಾಗಿ ಸರ್ಕಾರ ಪ್ರತ್ಯೇಕ ನಿಗಮ ಸ್ಥಾಪಿಸಬೇಕು’ ಎಂದು ರಾಜ್ಯ ಕೊರಮ–ಕೊರಚ ಮಹಿಳಾ ಸಮಾಜದ ಅಧ್ಯಕ್ಷೆ ಚಂದ್ರಿಕಾ ಬಿ.ಎನ್. ಒತ್ತಾಯಿಸಿದರು.
ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯ ಕೊರಮ, ಕೊರಚ ಮಹಿಳಾ ಸಮಾಜದ ರಾಜ್ಯಮಟ್ಟದ ಪ್ರಥಮ ಸಮಾವೇಶದಲ್ಲಿ ಅವರು ಮಾತನಾಡಿದರು.
‘ಸರ್ಕಾರದಿಂದ ರಾಜಕೀಯವಾಗಿ ನಮಗೆ ಪ್ರಾತಿನಿಧ್ಯ ಸಿಗಬೇಕು. ವಿವಿಧ ಚುನಾವಣೆಗಳಲ್ಲಿ ಸೀಟು ಹಂಚಿಕೆ ಮಾಡುವಾಗ ಎಲ್ಲ ರಾಜಕೀಯ ಪಕ್ಷಗಳು ನಮ್ಮ ಸಮಾಜಕ್ಕೆ ಪ್ರಾಧಾನ್ಯತೆ ನೀಡಬೇಕು’ ಎಂದು ಒತ್ತಾಯಿಸಿದರು.
ನಿಡಸೋಸಿಯ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ, ‘ಲಭ್ಯ ಅವಕಾಶ ಬಳಸಿಕೊಂಡು ಮಹಿಳೆಯರು ಎಲ್ಲ ರಂಗಗಳಲ್ಲಿ ಮುಂಚೂಣಿಗೆ ಬರಬೇಕಿದೆ’ ಎಂದರು.
ವಿವಿಧ ರಂಗಗಳಲ್ಲಿ ಸಾಧನೆಗೈದವನ್ನು ಸತ್ಕರಿಸಲಾಯಿತು.
ರಾಜ್ಯ ಕೊರಮ–ಕೊರಚ ಮಹಿಳಾ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷೆ ಯಶೋಧಾ ಭಜಂತ್ರಿ, ರೇಣುಕಾ ಮಲ್ಲೂರು, ಪದ್ಮಾವತಿ ಸಿಂಗನಹಳ್ಳಿ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.