ADVERTISEMENT

ಪ್ರತ್ಯೇಕ ರಾಜ್ಯಕ್ಕೆ ಬೇಡಿಕೆ ಸೂಕ್ತವಲ್ಲ: ಬಸವರಾಜ ಹೊರಟ್ಟಿ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2025, 22:49 IST
Last Updated 22 ನವೆಂಬರ್ 2025, 22:49 IST
<div class="paragraphs"><p>ಬಸವರಾಜ ಹೊರಟ್ಟಿ</p></div>

ಬಸವರಾಜ ಹೊರಟ್ಟಿ

   

ಹುಕ್ಕೇರಿ (ಬೆಳಗಾವಿ ಜಿಲ್ಲೆ): ‘ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗಿದ್ದಲ್ಲಿ, ಪ್ರತಿಭಟಿಸಿ ನ್ಯಾಯ ಪಡೆಯಬೇಕು. ಗಟ್ಟಿಧ್ವನಿಯಲ್ಲಿ ಬೇಡಿಕೆಗಳನ್ನು ಮಂಡಿಸಬೇಕು. ಪ್ರತ್ಯೇಕ ರಾಜ್ಯದ ಬೇಡಿಕೆ ಸೂಕ್ತವಲ್ಲ. ಇದನ್ನು ನಾನು ಒಪ್ಪುವುದಿಲ್ಲ’ ಎಂದು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

‘ಉತ್ತರ ಕರ್ನಾಟಕ ಜಿಲ್ಲೆಗಳ ಸಮಸ್ಯೆ ಕುರಿತ ಚರ್ಚೆಯಲ್ಲಿ ಈ ಭಾಗದ ಶಾಸಕರು ಸಕ್ರಿಯವಾಗಿ ಭಾಗವಹಿಸುವುದಿಲ್ಲ. ನಿರಾಸಕ್ತಿ ತೋರಿ ಹೊರಹೋಗುತ್ತಾರೆ. ದಕ್ಷಿಣ ಕರ್ನಾಟಕದ ಶಾಸಕರೇ ಹೆಚ್ಚು ಮಾತನಾಡುತ್ತಾರೆ’ ಎಂದೂ ಇಲ್ಲಿ ಶನಿವಾರ ಸುದ್ದಿಗಾರರಿಗೆ ತಿಳಿಸಿದರು.

ADVERTISEMENT

‘ಬೆಳಗಾವಿಯ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಶಾಸಕರ ವಸತಿಗಾಗಿ ₹ 20 ಕೋಟಿ ವ್ಯಯವಾಗುತ್ತದೆ. ಹೀಗಾಗಿ ಅಲ್ಲಿ ಶಾಸಕರ ಭವನ ನಿರ್ಮಿಸಲು ಸಲಹೆ ನೀಡಿರುವೆ’ ಎಂದರು.

‘ಚಳಿಗಾಲದ ಅಧಿವೇಶನದಲ್ಲಿ ನನ್ನ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದರೆ ತಲೆ ಕೆಡಿಸಿ ಕೊಳ್ಳುವುದಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.