ADVERTISEMENT

ಅಂಗವಿಕಲರಿಗೆ ವಿಶೇಷ ಪ್ಯಾಕೇಜ್‌: ಮನವಿ

​ಪ್ರಜಾವಾಣಿ ವಾರ್ತೆ
Published 10 ಮೇ 2020, 8:42 IST
Last Updated 10 ಮೇ 2020, 8:42 IST
ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೆ ಒಳಗಾಗಿರುವ ಅಂಗವಿಕಲರಿಗೆ ವಿಶೇಷ ಪ್ಯಾಕೇಜ್‌ ಘೋಷಿಸುವಂತೆ ಸರ್ಕಾರವನ್ನು ಆಗ್ರಹಿಸಿ ರಾಜ್ಯ ಅಂಗವಿಕಲರ ಒಕ್ಕೂಟದವರು ಬೆಳಗಾವಿಯಲ್ಲಿ ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಅವರಿಗೆ ಭಾನುವಾರ ಮನವಿ ಸಲ್ಲಿಸಿದರು

ಬೆಳಗಾವಿ: ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೆ ಒಳಗಾಗಿರುವ ಅಂಗವಿಕಲರಿಗೆ ವಿಶೇಷ ಪ್ಯಾಕೇಜ್‌ ಘೋಷಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿ ರಾಜ್ಯ ಅಂಗವಿಕಲರ ಒಕ್ಕೂಟದವರು ಇಲ್ಲಿ ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಅವರಿಗೆ ಭಾನುವಾರ ಮನವಿ ಸಲ್ಲಿಸಿದರು.

‘ಲಾಕ್‌ಡೌನ್‌ನಿಂದಾಗಿ ಕೆಲಸ ಇಲ್ಲದಂತಾಗಿದೆ. ಸ್ವಯಂ ಉದ್ಯೋಗ ಮಾಡುವವರಿಗೂ ತೊಂದರೆಯಾಗಿದೆ. ಹೀಗಾಗಿ, ದಿನಸಿ, ಆಹಾರ, ಮನೆ ಬಾಡಿಗೆ, ವಿದ್ಯುತ್‌ ಬಿಲ್ ಹಾಗೂ ವೈದ್ಯಕೀಯ ವೆಚ್ಚಕ್ಕೆ ಹಣ ಇಲ್ಲದಂತಾಗಿದೆ. ಪರಿಣಾಮ ಜೀವನ ದುಸ್ತರವಾಗಿದೆ. ಮುಖ್ಯಮಂತ್ರಿ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಅಂಗವಿಕಲರಿಗೆ ವಿಶೇಷ ಆರ್ಥಿಕ ನೆರವು ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.

ಒಕ್ಕೂಟದ ಅಧ್ಯಕ್ಷ ಮಹಾಂತೇಶ ಹೊಂಗಲ್, ಸೂರಜ್‌ ಧಾಮನೇಕರ ನೇತೃತ್ವ ವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.