ADVERTISEMENT

ಬೆಳಗಾವಿ: ಎಂಇಎಸ್ ನಿಷೇಧಿಸಲು ಆಗ್ರಹಿಸಿ ಮನವಿ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2020, 14:32 IST
Last Updated 28 ಆಗಸ್ಟ್ 2020, 14:32 IST
ಬೆಳಗಾವಿಯಲ್ಲಿ ಎಂಇಎಸ್ ಸಂಘಟನೆ ನಿಷೇಧಿಸುವಂತೆ ಆಗ್ರಹಿಸಿ ಕರವೇ (ಪ್ರವೀಣ್‌ ಶೆಟ್ಟಿ ಬಣ) ಜಿಲ್ಲಾ ಯುವ ಘಟಕದ ಅಧ್ಯಕ್ಷ ಆರ್. ಅಭಿಲಾಷ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು
ಬೆಳಗಾವಿಯಲ್ಲಿ ಎಂಇಎಸ್ ಸಂಘಟನೆ ನಿಷೇಧಿಸುವಂತೆ ಆಗ್ರಹಿಸಿ ಕರವೇ (ಪ್ರವೀಣ್‌ ಶೆಟ್ಟಿ ಬಣ) ಜಿಲ್ಲಾ ಯುವ ಘಟಕದ ಅಧ್ಯಕ್ಷ ಆರ್. ಅಭಿಲಾಷ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು   

ಬೆಳಗಾವಿ: ‘ದೇಶಪ್ರೇಮಿ, ನಾಡು ಕಂಡ ಅಪ್ರತಿಮ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಪೀರನವಾಡಿಯಲ್ಲಿ ಪ್ರತಿಷ್ಠಾಪಿಸಿದ್ದಕ್ಕೆ ವಿರೋಧಿಸುತ್ತಿರುವ ಎಂ.ಇ.ಎಸ್. ಸಂಘಟನೆ ನಿಷೇಧಿಸಬೇಕು’ ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್‌ಶೆಟ್ಟಿ ಬಣ) ಜಿಲ್ಲಾ ಯುವ ಘಟಕದ ಅಧ್ಯಕ್ಷ ಆರ್‌. ಅಭಿಲಾಷ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

‘ಪ್ರತಿಭಟನೆ ನಡೆಸಲು ಕಾರ್ಯಕರ್ತರು ಸೇರಿದ್ದೆವು. ಆದರೆ, ನಮ್ಮನ್ನು ಪೊಲೀಸರು ತಡೆದರು. ಕೆಲವು ಮುಖಂಡರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದೆವು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT