ADVERTISEMENT

‘ಪಾಪು’ ಹೆಸರಿನಲ್ಲಿ ಪೀಠ, ಸ್ಮಾರಕ ಸ್ಥಾಪಿಸಿ: ಶ್ರದ್ಧಾಜಲಿ ಸಭೆಯಲ್ಲಿ ನಿರ್ಣಯ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2020, 14:06 IST
Last Updated 18 ಮಾರ್ಚ್ 2020, 14:06 IST
ಬೆಳಗಾವಿಯಲ್ಲಿ ಬುಧವಾರ ನಡೆದ ಪಾಟೀಲ ಪುಟ್ಟಪ್ಪ ಶ್ರದ್ಧಾಂಜಲಿ ಸಭೆಯಲ್ಲಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು
ಬೆಳಗಾವಿಯಲ್ಲಿ ಬುಧವಾರ ನಡೆದ ಪಾಟೀಲ ಪುಟ್ಟಪ್ಪ ಶ್ರದ್ಧಾಂಜಲಿ ಸಭೆಯಲ್ಲಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು   

ಬೆಳಗಾವಿ: ‘ಹಿರಿಯ ಪತ್ರಕರ್ತ, ಕನ್ನಡಪರ ಹೋರಾಟಗಾರ ಡಾ.ಪಾಟೀಲ ಪುಟ್ಟಪ್ಪ ಅವರ ಹೆಸರಿನಲ್ಲಿ ನಗರದಲ್ಲಿ ಸ್ಮಾರಕ ಸ್ಥಾಪಿಸಬೇಕು’ ಎಂದು ಕನ್ನಡ ಸಾಹಿತ್ಯ ಭವನದಲ್ಲಿ ಬುಧವಾರ ನಡೆದ ಕನ್ನಡಪರ ಸಂಘಟನೆಗಳ ಮುಖಂಡರ ಸಭೆಯಲ್ಲಿ ರಾಜ್ಯ ಸರ್ಕಾರವನ್ನು ಆಗ್ರಹಿಸಿ ನಿರ್ಣಯ ಕೈಗೊಳ್ಳಲಾಯಿತು.

ನಾಗನೂರು ರುದ್ರಾಕ್ಷಿ ಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ, ಕಾರಂಜಿಮಠದ ಗುರುಸಿದ್ಧ ಸ್ವಾಮೀಜಿ ಹಾಗೂ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆದ ಸಭೆಯಲ್ಲಿ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಪುಟ್ಟಪ್ಪ ಹೆಸರಿನ ಅಧ್ಯಯನ ಪೀಠ ಸ್ಥಾಪಿಸಬೇಕು ಎಂದು ಆಗ್ರಹಿಸಲಾಯಿತು.

‘ಪುಟ್ಟಪ್ಪ ಬದುಕಿದ್ದಾಗ ಅವರ ಬಗ್ಗೆ ಗೌರವ ತೋರಿಸಲಿಲ್ಲ. ಅವರು ಅಗಲಿದಾಗ ಶೋಕಾಚರಣೆ ಘೋಷಿಸಲಿಲ್ಲ. ಇದು ಖಂಡನೀಯ’ ಎಂದು ಪ್ರಮುಖರು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಹೋರಾಟಗಾರರಾದ ಸಿದ್ದನಗೌಡ ಪಾಟೀಲ, ಅಶೋಕ ಚಂದರಗಿ, ಮಹಾದೇವ ತಳವಾರ, ಆರ್.ಎಸ್. ದರ್ಗೆ ಮಾತನಾಡಿ ಪುಟ್ಟಪ್ಪ ಅವರು ಬೆಳಗಾವಿಗಾಗಿ ಮಾಡಿದ ಸೇವೆಯನ್ನು ಸ್ಮರಿಸಿದರು.

ಮುಖಂಡ ಶಂಕರ ಬಾಗೇವಾಡಿ ಸ್ವಾಗತಿಸಿದರು.ಒಂದು ನಿಮಿಷ ಮೌನ ಆಚರಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.