ಬೆಳಗಾವಿ: ‘2019ರಲ್ಲಿ ಕೃಷ್ಣಾ ನದಿ ಪ್ರವಾಹದಿಂದ ಆಸ್ತಿಪಾಸ್ತಿ ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ನೀಡಬೇಕು ಹಾಗೂ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ರೈತರಿಗೆ ಎಫ್‌ಆರ್‌ಪಿ ಪ್ರಕಾರ ಬರಬೇಕಾದ ಬಾಕಿಯನ್ನು ಕೂಡಲೇ ಕೊಡಿಸಿಕೊಡಬೇಕು’ ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘ ಅಥಣಿ ಘಟಕದ ಪದಾಧಿಕಾರಿಗಳು ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.
ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಭರಮು ನಾಯಿಕ, ಅದನಗೌಡ ಮಲಗೌಡ ಪಾಟೀಲ, ದುಂಡಪ್ಪ ಅವಟಿ, ಮಾರುತಿ ಮೋಹಿತೆ, ಬಸವರಾಜ ಕೆಮಲಾಪುರ, ರವಿ ಭಟ್, ಬಸವರಾಜ ವಾಡೇದ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.