ADVERTISEMENT

ಮರಾಠಿ ಸಾಹಿತ್ಯ ಸಮ್ಮೇಳನಕ್ಕೆ ಅನುದಾನಕ್ಕೆ ಮನವಿ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2020, 9:09 IST
Last Updated 28 ಡಿಸೆಂಬರ್ 2020, 9:09 IST

ಬೆಳಗಾವಿ: ‘ಜಿಲ್ಲೆಯ ವಿವಿಧೆಡೆ ಮರಾಠಿ ಸಾಹಿತ್ಯ ಸಮ್ಮೇಳನ ನಡೆಸಲು ಸರ್ಕಾರದಿಂದ ಅನುದಾನ ನೀಡಬೇಕು’ ಎಂದು ಆಗ್ರಹಿಸಿ ಮರಾಠಿ ಸಾಹಿತ್ಯ ಮಹಾಮಂಡಳದವರು ಜಿಲ್ಲಾಧಿಕಾರಿ ಕಚೇರಿಗೆ ಸೋಮವಾರ ಮನವಿ ಸಲ್ಲಿಸಿದರು.

‘ಜನವರಿ, ಫೆಬ್ರುವರಿ, ಮಾರ್ಚ್‌ನಲ್ಲಿ ತಾಲ್ಲೂಕಿನ ಉಚಗಾಂವ, ಕುದ್ರೆಮನಿ, ಕಡೋಲಿ, ಯಳ್ಳೂರು, ನಿಲಜಿ, ಸಾಂಬ್ರಾ, ಬೆಳಗುಂದಿ ಹಾಗೂ ಖಾನಾಪುರ, ನಿಪ್ಪಾಣಿ, ಚಿಕ್ಕೋಡಿ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಪ್ರತಿ ವರ್ಷ ಮರಾಠಿ ಸಾಹಿತ್ಯ ಸಮ್ಮೇಳನ ನಡೆಸುತ್ತಾ ಬಂದಿದ್ದೇವೆ. ಈ ಸಮ್ಮೇಳನಗಳಲ್ಲಿ ಕನ್ನಡ ಮತ್ತು ಉರ್ದು ಭಾಷಿಕರು ಕೂಡ ಭಾಗವಹಿಸುತ್ತಾರೆ. ಸ್ಥಳೀಯ ಅತಿಥಿಗಳು ಮಾತ್ರ ಪಾಲ್ಗೊಳ್ಳುತ್ತಾರೆ’ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

‘ಸಮ್ಮೇಳನದಲ್ಲಿ ಸಾಂಸ್ಕೃತಿಕ ಚಟುವಟಿಕೆಗಳೂ ಇರುತ್ತವೆ. ಪ್ರಬಂಧ ರಚನೆ, ಮರಾಠಿ, ಕನ್ನಡ, ಉರ್ದು ಭಾಷೆಯಲ್ಲಿ ಉಪನ್ಯಾಸ ಕಾರ್ಯಕ್ರಮವನ್ನೂ ನಡೆಸಲಾಗುತ್ತದೆ. ಕೋವಿಡ್-19 ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ನಡೆಸಲಾಗುವುದು. ಆರ್ಥಿಕ ನೆರವು ಒದಗಿಸಬೇಕು’ ಎಂದು ಒತ್ತಾಯಿಸಲಾಗಿದೆ.

ADVERTISEMENT

ನಾಗೇಶ ಸಾತೇರಿ, ಆನಂದ ಮೆನಸೆ, ಕೃಷ್ಣ ಶಹಾಪುರಕರ, ಲಕ್ಷ್ಮಣ ಹೊನಗೇಕರ, ಸುಧೀರ ಚವಾಣ್, ಮಧು ಪಾಟೀಲ, ಗುಣವಂತ ಪಾಟೀಲ ಇದ್ದರು.

ಈವರೆಗೆ ಇಲ್ಲಿ ಮರಾಠಿ ಸಾಹಿತ್ಯ ಸಮ್ಮೇಳನಕ್ಕೆ ಅನುಮತಿಗೆ ಮನವಿ ಸಲ್ಲಿಸುತ್ತಿದ್ದರು. ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ಕೊಡುತ್ತಿತ್ತು. ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆಯಾಗಿರುವ ಹಿನ್ನೆಲೆಯಲ್ಲಿ, ಅನುದಾನಕ್ಕೆ ಬೇಡಿಕೆ ಇಟ್ಟಿರುವುದು ಚರ್ಚೆ ಹುಟ್ಟು ಹಾಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.