ADVERTISEMENT

‘ಲಿಂಗಾಯತ’ ಜಾತಿ ಪ್ರಮಾಣಪತ್ರಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2020, 12:17 IST
Last Updated 14 ಸೆಪ್ಟೆಂಬರ್ 2020, 12:17 IST
‘ಲಿಂಗಾಯತ’ ಜಾತಿ ಪ್ರಮಾಣಪತ್ರ ನೀಡುವಂತೆ ಆಗ್ರಹಿಸಿ ರಾಷ್ಟ್ರೀಯ ಬಸವ ದಳದ ಕಾರ್ಯಕರ್ತರು ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು
‘ಲಿಂಗಾಯತ’ ಜಾತಿ ಪ್ರಮಾಣಪತ್ರ ನೀಡುವಂತೆ ಆಗ್ರಹಿಸಿ ರಾಷ್ಟ್ರೀಯ ಬಸವ ದಳದ ಕಾರ್ಯಕರ್ತರು ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು   

ಬೆಳಗಾವಿ: ‘ಲಿಂಗಾಯತ’ ಜಾತಿ ಪ್ರಮಾಣಪತ್ರ ನೀಡುವಂತೆ ಆಗ್ರಹಿಸಿ ರಾಷ್ಟ್ರೀಯ ಬಸವ ದಳದ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

‘ಲಿಂಗಾಯತ ಸಮುದಾಯಕ್ಕೆ ಜಾತಿ ಪ್ರಮಾಣಪತ್ರ ಕೊಡುವಲ್ಲಿ ಲೋಪದೋಷಗಳು ಉಂಟಾಗುತ್ತಿವೆ. ನಮ್ಮ ಮೂಲ ಜಾತಿ ‘ಲಿಂಗಾಯತ’ ಆಗಿದೆ. ಆದರೆ, ಕಂದಾಯ ಇಲಾಖೆಯಿಂದ ‘ವೀರಶೈವ ಲಿಂಗಾಯತ’ ಎಂದು ನಮೂದಿಸಿ ಪ್ರಮಾಣಪತ್ರ ಕೊಡಲಾಗುತ್ತಿದೆ. ಇದು ನಮಗೆ ಮುಜುಗರ ಉಂಟು ಮಾಡುತ್ತಿದೆ’ ಎಂದು ತಿಳಿಸಿದರು.

‘ಲಿಂಗಾಯತ’ ಎಂದು ನಮೂದಿಸಿದ ಪ್ರಮಾಣಪತ್ರ ನೀಡುವ ಮೂಲಕ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು.

ADVERTISEMENT

ರಾಷ್ಟ್ರೀಯ ಬಸವ ದಳ ಜಿಲ್ಲಾ ಘಟಕದ ಅಧ್ಯಕ್ಷ ಕೆ. ಬಸವರಾಜ, ಲಿಂಗಾಯತ ಧರ್ಮ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಮಹಾಂತೇಶ ಗುಡಸ ಮತ್ತು ಉಪಾಧ್ಯಕ್ಷ ಮಾರಯ್ಯ ಗಡಗಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.