ADVERTISEMENT

ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅವಕಾಶ: ಮನವಿ

​ಪ್ರಜಾವಾಣಿ ವಾರ್ತೆ
Published 23 ಜುಲೈ 2020, 11:41 IST
Last Updated 23 ಜುಲೈ 2020, 11:41 IST
ಬೆಳಗಾವಿಯಲ್ಲಿ ಸಾರ್ವಜನಿಕ ಗಣೇಶೋತ್ಸವವನ್ನು ಸರಳವಾಗಿ ಆಚರಿಸಲು ಅವಕಾಶ ನೀಡುವಂತೆ ಆಗ್ರಹಿಸಿ ‘ಮಧ್ಯವರ್ತಿ ಸಾರ್ವಜನಿಕ ಗಣೇಶೋತ್ಸವ ಮಹಾಮಂಡಳ’ದ ಪದಾಧಿಕಾರಿಗಳು ಗುರುವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು
ಬೆಳಗಾವಿಯಲ್ಲಿ ಸಾರ್ವಜನಿಕ ಗಣೇಶೋತ್ಸವವನ್ನು ಸರಳವಾಗಿ ಆಚರಿಸಲು ಅವಕಾಶ ನೀಡುವಂತೆ ಆಗ್ರಹಿಸಿ ‘ಮಧ್ಯವರ್ತಿ ಸಾರ್ವಜನಿಕ ಗಣೇಶೋತ್ಸವ ಮಹಾಮಂಡಳ’ದ ಪದಾಧಿಕಾರಿಗಳು ಗುರುವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು   

ಬೆಳಗಾವಿ: ‘ನಗರದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಿಸಲು ಅವಕಾಶ ನೀಡಬೇಕು’ ಎಂದು ಆಗ್ರಹಿಸಿ ‘ಮಧ್ಯವರ್ತಿ ಸಾರ್ವಜನಿಕ ಗಣೇಶೋತ್ಸವ ಮಹಾಮಂಡಳ’ದ ಪದಾಧಿಕಾರಿಗಳು ಗುರುವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

‘ಸಾರ್ವಜನಿಕ ಗಣೇಶೋತ್ಸವ ರದ್ದುಪಡಿಸಲು ಸರ್ಕಾರ ಕ್ರಮ ಕೈಗೊಳ್ಳಬಾರದು. ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಸರ್ಕಾರ ವಿಧಿಸುವ ನಿರ್ಬಂಧಗಳನ್ನು ಪಾಲಿಸಿಕೊಂಡು ಉತ್ಸವ ನಡೆಸುವುದಕ್ಕೆ ನಾವು ಬದ್ಧವಾಗಿದ್ದೇವೆ. ಆದರೆ, ಸಂಪೂರ್ಣವಾಗಿ ರದ್ದುಪಡಿಸುವುದು ಸರಿಯಲ್ಲ. ಸಾಂಪ್ರದಾಯಿಕ ಹಾಗೂ ಸರಳವಾಗಿ ಆಚರಿಸಲು ಅನುಮತಿ ಕೊಡಬೇಕು’ ಎಂದು ಒತ್ತಾಯಿಸಿದರು.

ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು. ಅಧ್ಯಕ್ಷ ರಂಜಿತ್ ಪಾಟೀಲ, ಮುಖಂಡ ರಮಾಕಾಂತ ಕೊಂಡುಸ್ಕರ ನೇತೃತ್ವ ವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.