ADVERTISEMENT

ಅದ್ಧೂರಿ ಗಣೇಶೋತ್ಸವಕ್ಕೆ ಅವಕಾಶ: ಆಗ್ರಹ

​ಪ್ರಜಾವಾಣಿ ವಾರ್ತೆ
Published 6 ಜುಲೈ 2021, 11:15 IST
Last Updated 6 ಜುಲೈ 2021, 11:15 IST
ಬೆಳಗಾವಿಯಲ್ಲಿ ಅದ್ಧೂರಿ ಗಣೇಶೋತ್ಸವಕ್ಕೆ ಅವಕಾಶ ನೀಡುವಂತೆ ಶಹಾಪುರ ಸಾರ್ವಜನಿಕ ಗಣೇಶೋತ್ಸವ ಮಂಡಳಿಯವರು ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿ ಹೊರಬಂದರು
ಬೆಳಗಾವಿಯಲ್ಲಿ ಅದ್ಧೂರಿ ಗಣೇಶೋತ್ಸವಕ್ಕೆ ಅವಕಾಶ ನೀಡುವಂತೆ ಶಹಾಪುರ ಸಾರ್ವಜನಿಕ ಗಣೇಶೋತ್ಸವ ಮಂಡಳಿಯವರು ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿ ಹೊರಬಂದರು   

ಬೆಳಗಾವಿ: ‘ಈ ಬಾರಿ ಸಾರ್ವಜನಿಕ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಯೋಜಿಸಲು ಅನುಮತಿ ನೀಡಬೇಕು’ ಎಂದು ಒತ್ತಾಯಿಸಿ ಶಹಾಪುರ ಸಾರ್ವಜನಿಕ ಗಣೇಶೋತ್ಸವ ಮಂಡಳಿಯವರು ಜಿಲ್ಲಾಧಿಕಾರಿ ಕಚೇರಿಗೆ ಮಂಗಳವಾರ ಮನವಿ ಸಲ್ಲಿಸಿದರು.

‘ಹೋದ ಬಾರಿ ಕೋವಿಡ್ ಕಾರಣದಿಂದಾಗಿ ಸರಳವಾಗಿ ಗಣೇಶೋತ್ಸವ ಆಚರಿಸಲಾಯಿತು. ಸಾರ್ವಜನಿಕವಾಗಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಅವಕಾಶವಿರಲಿಲ್ಲ. ಈ ಬಾರಿ ಕೋವಿಡ್ ಪ್ರಕರಣಗಳು ತಗ್ಗಿರುವುದರಿಂದಾಗಿ ಸಂಭ್ರಮದಿಂದ ಮತ್ತು ದೊಡ್ಡಮಟ್ಟದಲ್ಲಿ ಆಯೋಜಿಸಲು ನಿರ್ಬಂಧ ಹೇರಬಾರದು’ ಎಂದು ಒತ್ತಾಯಿಸಿದರು.

ಕಾರ್ಯಾಧ್ಯಕ್ಷ ರಮೇಶ ಸೊಂಟಕ್ಕಿ ಮಾತನಾಡಿ, ‘ಕಳೆದ ಬಾರಿ ಗಣೇಶೋತ್ಸವವನ್ನು ಸರಳವಾಗಿ ಆಚರಿಸಿ ಜಿಲ್ಲಾಡಳಿತಕ್ಕೆ ಸಹಕಾರ ನೀಡಿದ್ದೇವೆ. ಈ ವರ್ಷ ಲಾಕ್‍ಡೌನ್ ತೆರವಾಗಿದೆ. ಆದ್ದರಿಂದ ಅದ್ದೂರಿ ಗಣೇಶೋತ್ಸವಕ್ಕೆ ಅವಕಾಶ ಕೊಡಬೇಕು. ಹಬ್ಬಕ್ಕೆ ಒಂದು ವಾರ ಇರುವಾಗ ಮೂರ್ತಿಗಳ ಎತ್ತರಕ್ಕೆ ನಿರ್ಬಂಧ ಹೇರುವುದನ್ನು ಕೈಬಿಡಬೇಕು. ಒಂದು ವೇಳೆ ನಿಯಮ ಜಾರಿಗೊಳಿಸುವುದಿದ್ದರೆ ಮುಂಚಿತವಾಗಿಯೇ ತಿಳಿಸಬೇಕು. ಇಲ್ಲವಾದರೆ ಮೂರ್ತಿಕಾರರಿಗೆ ಅನ್ಯಾಯವಾಗುತ್ತದೆ ಮತ್ತು ನಷ್ಟವೂ ಉಂಟಾಗುತ್ತದೆ’ ಎಂದು ಕೋರಿದರು.

ADVERTISEMENT

ಅಧ್ಯಕ್ಷ ನೇತಾಜಿ ಜಾಧವ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.