ADVERTISEMENT

‘ಲಿಂಗಾಯತ’ ಜಾತಿ ಪ್ರಮಾಣಪತ್ರ ವಿತರಣೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2020, 11:57 IST
Last Updated 18 ಸೆಪ್ಟೆಂಬರ್ 2020, 11:57 IST
ಗೋಕಾಕದಲ್ಲಿ ಶುಕ್ರವಾರ ರಾಷ್ಟ್ರೀಯ ಬಸವದಳ ಹಾಗೂ ಲಿಂಗಾಯತ ಸಮಾಜದವರು ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಸ್ವಾಮೀಜಿ  ನೇತೃತ್ವದಲ್ಲಿ ಲಿಂಗಾಯತ ಜಾತಿ ಪ್ರಮಾಣಪತ್ರ ನೀಡುವಂತೆ ಆಗ್ರಹಿಸಿ ತಹಶೀಲ್ದಾರ್‌ ಕಚೇರಿಗೆ ಮನವಿ ಸಲ್ಲಿಸಿದರು
ಗೋಕಾಕದಲ್ಲಿ ಶುಕ್ರವಾರ ರಾಷ್ಟ್ರೀಯ ಬಸವದಳ ಹಾಗೂ ಲಿಂಗಾಯತ ಸಮಾಜದವರು ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಸ್ವಾಮೀಜಿ  ನೇತೃತ್ವದಲ್ಲಿ ಲಿಂಗಾಯತ ಜಾತಿ ಪ್ರಮಾಣಪತ್ರ ನೀಡುವಂತೆ ಆಗ್ರಹಿಸಿ ತಹಶೀಲ್ದಾರ್‌ ಕಚೇರಿಗೆ ಮನವಿ ಸಲ್ಲಿಸಿದರು   

ಗೋಕಾಕ: ಲಿಂಗಾಯತ ಜಾತಿ ಪ್ರಮಾಣಪತ್ರ ನೀಡುವಂತೆ ಆಗ್ರಹಿಸಿ ರಾಷ್ಟ್ರೀಯ ಬಸವದಳ ನೇತೃತ್ವದಲ್ಲಿ ಲಿಂಗಾಯತ ಸಮಾಜದವರು ಶೂನ್ಯ ಸಂಪಾದನಾ ಮಠದ ಮುರುಘರಾಜೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ತಹಶೀಲ್ದಾರ್ ಕಚೇರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

ಬಸವೇಶ್ವರ ವೃತ್ತದಿಂದ ಮಿನಿ ವಿಧಾನಸೌಧದವರೆಗೆ ಮೆರವಣಿಗೆ ನಡೆಸಿದರು.

‘2002ರವರೆಗೆ ಕಂದಾಯ ಇಲಾಖೆಯವರು ಲಿಂಗಾಯತ ಎಂದು ಜಾತಿ ಪ್ರಮಾಣಪತ್ರ ನೀಡುತ್ತಿದ್ದರು. ಬಳಿಕ ವೀರಶೈವ-ಲಿಂಗಾಯತ ಎಂದು ನಮೂದಿಸುತ್ತಿದ್ದಾರೆ. ಈ ಮೂಲಕ ನಮಗೆ ಅನ್ಯಾಯ ಮಾಡುತ್ತಿದ್ದಾರೆ. ಇದನ್ನು ತಪ್ಪಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಮುಖಂಡರಾದ ಬಸನಗೌಡ ಪಾಟೀಲ, ಮಲ್ಲಿಕಾರ್ಜುನ ಈಟಿ, ವಿವೇಕ ಜತ್ತಿ, ಸಂಜಯ ಪಾಟೀಲ, ಚನ್ನಬಸವ ಬಿಜಲಿ, ಶಕುಂತಲಾ ಕಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.